Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:6 - ಕನ್ನಡ ಸತ್ಯವೇದವು J.V. (BSI)

6 ಮೂಢರಿಗೆ ಮಹಾಪದವಿ ದೊರೆತಿರುವದು, ಘನವಂತರು ಹೀನ ಸ್ಥಿತಿಯಲ್ಲಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದು ಯಾವುದೆಂದರೆ, ಮೂಢರನ್ನು ಮಹಾಪದವಿಗೆ ಏರಿಸುತ್ತಾರೆ; ಘನವಂತರನ್ನು ಹೀನಸ್ಥಿತಿಯಲ್ಲಿ ಇರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಘನವಂತರಿಗೆ ಹೀನವಾದ ಸ್ಥಾನ ದೊರೆಯುವುದು; ಮೂಢರಿಗೆ ಮುಖ್ಯವಾದ ಪದವಿಗಳು ದೊರೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:6
11 ತಿಳಿವುಗಳ ಹೋಲಿಕೆ  

ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವದು; ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.


ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ; ದುಷ್ಟನ ಆಳಿಕೆ ಜನರಿಗೆ ನರಳಾಟ.


ನೀನು ನಮ್ಮನ್ನು ಅವರಿಂದ ತಪ್ಪಿಸಿ ಕಾಪಾಡುವಿ; ಸದಾಕಾಲವೂ ನಮ್ಮನ್ನು ಕಾಯುವಿ.


ಇದಾದನಂತರ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಪದವಿಯಲ್ಲಿ ಹೆಚ್ಚಿಸಿ ಅವನಿಗೆ ದೊಡ್ಡ ಅಧಿಕಾರವನ್ನು ಕೊಟ್ಟು ತನ್ನ ಒಡ್ಡೋಲಗದ ಎಲ್ಲಾ ಸರದಾರರಲ್ಲಿ ಅವನಿಗೆ ಪ್ರಥಮಾಸನವನ್ನು ಅನುಗ್ರಹಿಸಿದನು.


ದುಷ್ಟರು ಎದ್ದರೆ ಜನರು ಅಡಗಿಕೊಳ್ಳುವರು; ನಾಶನವಾದರೆ ಶಿಷ್ಟರು ವೃದ್ಧಿಯಾಗುವರು.


ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುವದಿಲ್ಲವೆಂದು ಹಾಮಾನನು ನೋಡಿ ಬಹು ಕೋಪವುಳ್ಳವನಾದನು.


ಮೂಢನಿಗೆ ಮೃದುಜೀವನವು ಅಯುಕ್ತ; ದಾಸನಿಗೆ ದೊರೆಗಳ ಮೇಲಣ ದೊರೆತನ ಇನ್ನೂ ಅಯುಕ್ತ.


ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ದೊರೆಯ ಪ್ರಮಾದದಿಂದಾದದ್ದೆಂದು ತೋರುತ್ತದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು