Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:8 - ಕನ್ನಡ ಸತ್ಯವೇದವು J.V. (BSI)

8 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಗೋಡೆಯೊಡೆಯುವವನನ್ನು ಹಾವು ಕಚ್ಚುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಗೋಡೆಯನ್ನು ಒಡೆಯುವವನಿಗೆ, ಹಾವು ಕಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ಗೋಡೆ ಒಡೆಯುವವನನ್ನು ಹಾವು ಕಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗುಂಡಿತೋಡುವವನು ತಾನೇ ಅದರಲ್ಲಿ ಬೀಳಬಹುದು. ಗೋಡೆಯನ್ನು ಹೊಡೆದು ಉರುಳಿಸುವವನನ್ನು ಹಾವು ಕಚ್ಚುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:8
13 ತಿಳಿವುಗಳ ಹೋಲಿಕೆ  

ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವದು.


ಹಾಮಾನನನ್ನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿಗೆ ಹಾಕಿದರು. ಅರಸನ ಕೋಪವೂ ಶಾಂತವಾಯಿತು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವುತುಕೊಳ್ಳಲಿ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು; ನನ್ನ ಕಣ್ಣಿಗೆ ಮರೆಯಾಗಿ ಸಮುದ್ರತಳದಲ್ಲಿ ಅಡಗಿಕೊಂಡರೇನು, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವದು;


ಸಿಂಹದ ಕಡೆಯಿಂದ ಓಡಿದವನಿಗೆ ಕರಡಿಯು ಎದುರುಬಿದ್ದಂತಾಗುವದು; ಅವನು ಮನೆಗೆ ಓಡಿಬಂದು ಕೈಯನ್ನು ಗೋಡೆಯ ಮೇಲೆ ಊರಲು ಹಾವು ಕಚ್ಚಿದ ಹಾಗಾಗುವದು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.


ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದುಹಾಕಿದರು.


ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ.


ಧರ್ಮವು ಯಥಾರ್ಥವಂತರನ್ನು ಉದ್ಧರಿಸುವದು; ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.


ಎಲ್ಲೆಕಲ್ಲೆತ್ತುವವನಿಗೆ ಹಾನಿಯಾಗುವದು; ಮರವನ್ನು ಕಡಿಯುವವನಿಗೆ ಅಪಾಯವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು