ಪ್ರಸಂಗಿ 11:6 - ಕನ್ನಡ ಸತ್ಯವೇದವು J.V. (BSI)6 ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ. ಅಧ್ಯಾಯವನ್ನು ನೋಡಿ |