ಪ್ರಸಂಗಿ 11:9 - ಕನ್ನಡ ಸತ್ಯವೇದವು J.V. (BSI)9 ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ. ಅಧ್ಯಾಯವನ್ನು ನೋಡಿ |