Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:3 - ಕನ್ನಡ ಸತ್ಯವೇದವು J.V. (BSI)

3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬೊಗ್ಗುವರು, ಅರೆಯುವವರು ಕೊಂಚವಾದದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸಮಯದಲ್ಲಿ, ನಿನ್ನ ಬಲಿಷ್ಠವಾದ ತೋಳುಗಳು ಶಕ್ತಿಯನ್ನು ಕಳೆದುಕೊಳ್ಳುತ್ತವೆ; ನಿನ್ನ ಬಲಿಷ್ಠವಾದ ಕಾಲುಗಳು ಬಲಹೀನವಾಗಿ ಬಗ್ಗಿಹೋಗುತ್ತವೆ; ನಿನ್ನ ಹಲ್ಲುಗಳು ಬಿದ್ದುಹೋಗುತ್ತವೆ; ಆಗ ನೀನು ಆಹಾರವನ್ನು ಅಗಿದು ತಿನ್ನಲಾರೆ. ನಿನ್ನ ಕಣ್ಣುಗಳು ಮೊಬ್ಬಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ದಿನದಲ್ಲಿ ಮನೆ ಕಾಯುವವರು ನಡುಗುವರು. ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:3
9 ತಿಳಿವುಗಳ ಹೋಲಿಕೆ  

ಆತನು ದಾರಿಯಲ್ಲಿಯೇ ನನ್ನ ಬಲವನ್ನು ಕುಂದಿಸಿದ್ದಾನೆ;


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇನ್ನು ಮುಂದೆ ಯೆರೂಸಲೇವಿುನ ಚೌಕಗಳಲ್ಲಿ ಮುದುಕ ಮುದುಕಿಯರು ಕೂಡ್ರುವರು; ಅತಿವೃದ್ಧಾಪ್ಯದ ನಿವಿುತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವದು.


ಏಲಿಯ ಕಣ್ಣುಗಳು ದಿನದಿನಕ್ಕೆ ಮೊಬ್ಬಾಗುತ್ತಾ ಬಂದು ಚೆನ್ನಾಗಿ ಕಾಣದೆಹೋಗಿದ್ದವು. ಅವನು ಒಂದಾನೊಂದು ರಾತ್ರಿ ತನ್ನ ಸ್ಥಳದಲ್ಲಿ ಮಲಗಿದ್ದನು;


ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬುಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ತನ್ನ ಹಿರೀ ಮಗನಾದ ಏಸಾವನನ್ನು ಕರೆದು - ಮಗನೇ ಅನ್ನಲು ಏಸಾವನು - ಇದ್ದೇನೆ ಅಂದನು.


ಅಸ್ವಸ್ಥನಾದವನನ್ನು ಸ್ನೇಹಿತನೂ ಅಣ್ಣನೂ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು.


ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು