ಪ್ರಸಂಗಿ 2:11 - ಕನ್ನಡ ಸತ್ಯವೇದವು J.V. (BSI)11 ಆಗ ನನ್ನ ಕೈಯಿಂದ ನಡಿಸಿದ ಎಲ್ಲಾ ಕೆಲಸಗಳಲ್ಲಿಯೂ ನಾನು ಪಟ್ಟ ಪ್ರಯಾಸದಲ್ಲಿಯೂ ದೃಷ್ಟಿಯಿಟ್ಟೆನು; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು, ಲೋಕದಲ್ಲಿ ಯಾವ ಲಾಭವೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ನನ್ನ ಕೈಯಿಂದ ನಡೆಸಿದ ಎಲ್ಲಾ ಕೆಲಸಗಳನ್ನೂ, ನಾನು ಪಟ್ಟ ಪ್ರಯಾಸಗಳನ್ನೂ ಗಮನವಿಟ್ಟು ಪರಿಶೀಲಿಸಿದೆ, ಆಹಾ ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು. ಸೂರ್ಯನ ಕೆಳಗೆ ಯಾವ ಲಾಭವೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನ್ನ ಕೈಗಳು ನಡೆಸಿದವುಗಳೆಲ್ಲವನ್ನೂ ನಾನು ಸಾಧಿಸಲು ಪ್ರಯಾಸಪಟ್ಟದ್ದನ್ನೂ ಪರಿಶೀಲಿಸಿ ನೋಡಿದೆ. ಗಾಳಿಯನ್ನು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥವಾಗಿತ್ತು. ಸೂರ್ಯನ ಕೆಳಗೆ ಯಾವುದೂ ಲಾಭಕರವಾಗಿ ಕಾಣಲಿಲ್ಲ. ಅಧ್ಯಾಯವನ್ನು ನೋಡಿ |