Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:14 - ಕನ್ನಡ ಸತ್ಯವೇದವು J.V. (BSI)

14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವದು, ಮೂಢನು ಕತ್ತಲಲ್ಲಿ ನಡೆಯುವನು; ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೋ ಕತ್ತಲೆಯಲ್ಲಿ ನಡೆದುಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುತ್ತದೆ. ಆದರೆ ಮೂಢನು ಕತ್ತಲೆಯಲ್ಲಿ ನಡೆಯುತ್ತಾನೆ. ಇವರಿಬ್ಬರಿಗೂ ಒಂದೇ ಗತಿಯು ಸಂಭವಿಸುವುದೆಂದೂ ನಾನು ಗ್ರಹಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:14
16 ತಿಳಿವುಗಳ ಹೋಲಿಕೆ  

ಸುಜ್ಞಾನಿಗಳು ಸಾಯುವದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.


ವಿವೇಕಿಗೆ ಜ್ಞಾನವೇ ಗುರಿಯಾಗಿರುವದು; ಮೂಢನ ದೃಷ್ಟಿಯು ದಿಗಂತಗಳಲ್ಲಿಯೂ ಅಲೆಯುವದು.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ, ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕಾಣದ ಹಾಗೆ ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಅವನಿಗೆ ತಿಳಿಯದು.


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವದು; ಎಲ್ಲಕ್ಕೂ ಪ್ರಾಣ ಒಂದೇ; ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ; ಎಲ್ಲಾ ಬರೀ ಗಾಳಿಯೇ.


ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.


ಜ್ಞಾನಿಯ ಹಾಗಿರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವದು.


ಜನನ ದಿನಕ್ಕಿಂತ ಮರಣ ದಿನ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವದು ಲೇಸು; ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ; ಜೀವಂತನು ಇದನ್ನು ನೋಡಿ ಸ್ಮರಿಸಿಕೊಳ್ಳುವನು.


ಸಾವಿರದ ಮೇಲೆ ಸಾವಿರ ವರುಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ [ಏನು ಪ್ರಯೋಜನ?] ಇವೆರಡು ಒಂದೇ ಸ್ಥಳಕ್ಕೆ ಹೋಗುತ್ತವಲ್ಲವೆ.


ಮಾರ್ಗವನ್ನು ಗ್ರಹಿಸಿಕೊಳ್ಳುವದೇ ಜಾಣನ ಜ್ಞಾನ; ಮೂಢರ ಮೂರ್ಖತನ ಮೋಸಕರ.


ಅವು ಬಂಗಾರಕ್ಕಿಂತಲೂ ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.


ಏಕಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ನಿರಂತರವಾಗಿ ಮರೆತುಹೋಗುವನು. ಈಗಿನವರೆಲ್ಲಾ ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರಷ್ಟೆ. ಆಹಾ, ಮೂಢನಂತೆ ಜ್ಞಾನಿಯೂ ಸಾಯುವನು!


ಯಾರು ವಿಸ್ತಾರವಾದ ಭೂಸ್ಥಿತಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೋ ಅಂಥವರಿಗೂ ಸಮಾಧಿಯೇ ಶಾಶ್ವತಮಂದಿರವು; ಅದೇ ಅವರ ನಿತ್ಯನಿವಾಸಸ್ಥಾನ.


ಜ್ಞಾನಿಯಾಗಲಿ ಜನರ ಮುಂದೆ ಸರಿಯಾಗಿ ನಡೆಯಬಲ್ಲ ಬಡವನಾಗಲಿ ಮೂಢನಿಗಿಂತ ಯಾವ ವಿಷಯದಲ್ಲಿ ಶ್ರೇಷ್ಠ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು