ಪ್ರಸಂಗಿ 2:15 - ಕನ್ನಡ ಸತ್ಯವೇದವು J.V. (BSI)15 ಆಗ ನಾನು - ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುವದು; ನನ್ನ ಹೆಚ್ಚು ಜ್ಞಾನದಿಂದೇನು? ಇದೂ ವ್ಯರ್ಥವಲ್ಲವೆ ಅಂದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ನಾನು ನನ್ನ ಹೃದಯದಲ್ಲಿ, “ಮೂಢನಿಗೆ ಸಂಭವಿಸುವ ಗತಿಯು, ನನಗೂ ಸಂಭವಿಸುವುದು. ನನ್ನ ಹೆಚ್ಚು ಜ್ಞಾನದಿಂದ ಲಾಭವೇನು?” ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ಮೂಢನಿಗೆ ಸಂಭವಿಸುವ ಗತಿ ನನಗೂ ಸಂಭವಿಸುವುದಾದರೆ ನನ್ನ ಹೆಚ್ಚಿನ ಜ್ಞಾನದಿಂದ ಪ್ರಯೋಜನವೇನು? ಇದೂ ವ್ಯರ್ಥವೇ!” ಎಂದುಕೊಂಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ನಾನು ನನ್ನ ಮನಸ್ಸಿನಲ್ಲಿ, “ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುತ್ತದೆ. ನಾನು ಜ್ಞಾನಿಯಾಗುವುದರಿಂದ ಲಾಭವೇನು?” “ಇದು ಸಹ ವ್ಯರ್ಥವೇ,” ಎಂದುಕೊಂಡೆನು. ಅಧ್ಯಾಯವನ್ನು ನೋಡಿ |