Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:17 - ಕನ್ನಡ ಸತ್ಯವೇದವು J.V. (BSI)

17 ಲೋಕವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದರಿಂದ ಜೀವವೇ ಅಸಹ್ಯವಾಗಿ ತೋರಿತು; ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಲೋಕ ವ್ಯವಹಾರವು ಕೆಟ್ಟದ್ದೆಂದು ನನಗೆ ಕಂಡುಬಂದದ್ದರಿಂದ ಜೀವವೇ ಅಸಹ್ಯವಾಗಿ ತೋರಿತು. ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡುಬಂದದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸೂರ್ಯನ ಕೆಳಗೆ ನಡೆಯುವ ಕಾರ್ಯವು ನನಗೆ ದುಃಖಕರವಾಗಿ ತೋರಿತು. ಆದಕಾರಣ ನಾನು ನನ್ನ ಜೀವನವನ್ನು ಹಗೆ ಮಾಡಿದೆನು. ಗಾಳಿಯನ್ನು ಬೆನ್ನಟ್ಟುವಂತೆ ಎಲ್ಲವೂ ವ್ಯರ್ಥವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:17
20 ತಿಳಿವುಗಳ ಹೋಲಿಕೆ  

ಆಗ ನನ್ನ ಕೈಯಿಂದ ನಡಿಸಿದ ಎಲ್ಲಾ ಕೆಲಸಗಳಲ್ಲಿಯೂ ನಾನು ಪಟ್ಟ ಪ್ರಯಾಸದಲ್ಲಿಯೂ ದೃಷ್ಟಿಯಿಟ್ಟೆನು; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು, ಲೋಕದಲ್ಲಿ ಯಾವ ಲಾಭವೂ ಕಾಣಲಿಲ್ಲ.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಇದನ್ನು ನೋಡಿ ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು;


ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ.


ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ಬಗೆಬಗೆಯಾಗಿ ಆಶಿಸುವದಕ್ಕಿಂತ ಕಣ್ಣೆದುರಿಗಿರುವದನ್ನು ಅನುಭವಿಸುವದೇ ಲೇಸು; ಇದು ಕೂಡ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಇದಲ್ಲದೆ ನಾನು ಲೋಕವನ್ನು ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ ಧರ್ಮಸ್ಥಾನದಲ್ಲಿಯೂ ಅಧರ್ಮವಿರುವದೆಂದು ನೋಡಿದೆನು.


ಲೋಕದಲ್ಲಿ ಮನುಷ್ಯನು ಹೃದಯಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಲಾಭವೇನು?


ಲೋಕದಲ್ಲಿ ನಡೆಯುವ ಕೆಲಸಗಳನ್ನೆಲ್ಲಾ ನೋಡಿದ್ದೇನೆ; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ ಎಂಥಾ ವ್ಯರ್ಥಕ್ಕಾಗಿಯೇ ಮನುಷ್ಯರನ್ನು ನಿರ್ಮಿಸಿದ್ದೀ ಎಂದೂ ಜ್ಞಾಪಿಸಿಕೋ.


ನೀನು ನನ್ನನ್ನು ಪಾತಾಳದಲ್ಲಿ ಬಚ್ಚಿಟ್ಟು ನಿನ್ನ ಕೋಪವು ಇಳಿಯುವ ಪರ್ಯಂತ ನನ್ನನ್ನು ಮರೆಮಾಡಿ ನನಗೆ ಅವಧಿಯನ್ನು ಗೊತ್ತುಮಾಡಿ [ಕಡೆಯಲ್ಲಿ] ನನ್ನನ್ನು ಜ್ಞಾಪಿಸಿಕೊಂಡರೆ ಎಷ್ಟೋ ಒಳ್ಳೇದು!


ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ


ನೀನು ಹೀಗೆ ಮಾಡುವದಕ್ಕಿಂತಲೂ ನನ್ನನ್ನು ಈಗಲೇ ಕೊಂದುಹಾಕಿಬಿಟ್ಟರೆ ಉಪಕಾರ; ನನಗಾಗುವ ದುರವಸ್ಥೆಯನ್ನು ನಾನು ನೋಡಲಾರೆನು ಅಂದನು.


ಜ್ಞಾನವನ್ನಲ್ಲದೆ ಮರುಳುತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಲು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ಎಂದು ಅರಿತುಕೊಂಡೆನು.


ಹೌದು, ಈ ಉಭಯರಿಗಿಂತಲೂ ಇನ್ನು ಹುಟ್ಟದೆ ಲೋಕದಲ್ಲಿನ ಅಧರ್ಮವನ್ನು ನೋಡದೆ ಇರುವವನೇ ಲೇಸೆಂದು ತಿಳಿದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು