Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:19 - ಕನ್ನಡ ಸತ್ಯವೇದವು J.V. (BSI)

19 ಅವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವದರಲ್ಲಿ ಜ್ಞಾನವನ್ನೂ ಪ್ರಯಾಸವನ್ನೂ ವ್ರಯಮಾಡಿದ್ದೇನೋ ಅದರ ಮೇಲೆ ದೊರೆತನ ಮಾಡುವನು. ಇದೂ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಅವನು ಎಂಥವನಾದರೂ ನಾನು ಲೋಕದಲ್ಲಿ ಬುದ್ಧಿ ಖರ್ಚುಮಾಡಿ ಗಳಿಸಿದ ದುಡಿಮೆಯ ಫಲಕ್ಕೆಲ್ಲ ಅವನು ಒಡೆಯನಾಗುತ್ತಾನೆ. ಇದು ಸಹ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಜ್ಞಾನವನ್ನೂ ಪ್ರಯಾಸವನ್ನೂ ಯಾವುದರಲ್ಲಿ ವಿನಿಯೋಗಿಸಿದ್ದೇನೋ ಅದರ ಮೇಲೆ ಬೇರೊಬ್ಬನು ದೊರೆತನ ಮಾಡುವನು. ಅವನು ಜ್ಞಾನಿಯೋ ಮೂಢನೋ ನನಗೆ ಗೊತ್ತಿಲ್ಲ. ಇದೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ತೋರ್ಪಡಿಸಿಕೊಂಡದರ ಮೇಲೆಯೂ ಅವನು ಆಳುವನು. ಇದು ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:19
14 ತಿಳಿವುಗಳ ಹೋಲಿಕೆ  

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಈ ಪ್ರಕಾರ ನಾನು ಯೋಚಿಸಿ, ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ; ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದನಂತರ ಸಂಭವಿಸುವವುಗಳನ್ನು ನೋಡುವದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.


ಯಜಮಾನನು ಇದನ್ನು ಕೇಳಿ ಅನ್ಯಾಯಗಾರನಾದ ಆ ಮನೆವಾರ್ತೆಯವನನ್ನು - ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಯಾಕಂದರೆ ಲೌಕಿಕರು ತಮ್ಮಂಥವರ ವಿಷಯದಲ್ಲಿ ಬೆಳಕಿನ ರಾಜ್ಯದವರಿಗಿಂತಲೂ ಜಾಣರಾಗಿದ್ದಾರೆ.


ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು; ಅದು ದೊಡ್ಡದೆಂದು ತೋಚಿತು;


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ


ಹೀಗಿರಲು ನಾನು ಲೋಕದಲ್ಲಿ ಪ್ರಯಾಸಪಟ್ಟ ಕೆಲಸದ ವಿಷಯವಾಗಿ ನಿರಾಶೆಗೊಳಗಾದೆನು.


ಪಿತೃಗಳ ಬಳಿಗೆ ಸೇರಿದನು; ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಆಗ ನನ್ನ ಕೈಯಿಂದ ನಡಿಸಿದ ಎಲ್ಲಾ ಕೆಲಸಗಳಲ್ಲಿಯೂ ನಾನು ಪಟ್ಟ ಪ್ರಯಾಸದಲ್ಲಿಯೂ ದೃಷ್ಟಿಯಿಟ್ಟೆನು; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು, ಲೋಕದಲ್ಲಿ ಯಾವ ಲಾಭವೂ ಕಾಣಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು