Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:24 - ಕನ್ನಡ ಸತ್ಯವೇದವು J.V. (BSI)

24 ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24-25 ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:24
22 ತಿಳಿವುಗಳ ಹೋಲಿಕೆ  

ಈ ಪ್ರಕಾರ ನಾನು ಯೋಚಿಸಿ, ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ; ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದನಂತರ ಸಂಭವಿಸುವವುಗಳನ್ನು ನೋಡುವದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ


ಮತ್ತು ಮನುಷ್ಯನು ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವದಕ್ಕಿಂತ ಅವನಿಗೆ ಲೋಕದಲ್ಲಿ ಇನ್ನಾವ ಮೇಲೂ ಇಲ್ಲವೆಂದು ಸಂತೋಷವನ್ನೇ ಸ್ತುತಿಸಿದೆನು; ದೇವರು ಅವನಿಗೆ ಲೋಕದಲ್ಲಿ ಅನುಗ್ರಹಿಸುವ ದಿನಗಳಲ್ಲೆಲ್ಲಾ ಅವನು ಪಡುವ ಪ್ರಯಾಸದಲ್ಲಿ ಸಂತೋಷವೇ ಸೇರಿರುವದು.


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳದಲ್ಲೇ ಆತನ ಸನ್ನಿಧಿಯಲ್ಲಿ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲಾ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷದಿಂದಿದ್ದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಇಂಥವುಗಳನ್ನು ಊಟಮಾಡಬೇಕು.


ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ನಿಮಗೆ ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲಗಳನ್ನೂ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ ಉಪಕಾರ ಮಾಡುತ್ತಾ ಬಂದವನು ಆತನೇ ಎಂದು ಹೇಳಿದರು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮಂದಟ್ಟುಮಾಡಿಕೊಳ್ಳದಿದ್ದರೆ ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮಂದಟ್ಟುಮಾಡಿಕೊಳ್ಳದ ಕಾರಣ ಅವುಗಳನ್ನು ಶಪಿಸೇ ಇದ್ದೇನೆ.


ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ.


ಆದುಕೊಳ್ಳುವ ಸ್ಥಳಕ್ಕೇ ತಂದು ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸ ದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಇದಲ್ಲದೆ ಎಜ್ರನು ಅವರಿಗೆ - ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿರಿ; ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಭಾಗಗಳನ್ನು ಕಳುಹಿಸಿರಿ. ಈ ದಿನವು ನಮ್ಮ ಕರ್ತನಿಗೆ ಪ್ರತಿಷ್ಠಿತ ದಿನವಾಗಿರುವದರಿಂದ ವ್ಯಸನಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಆಶ್ರಯವಾಗಿದೆ ಅಂದನು.


ಆಕಾಶದ ಕೆಳಗೆ ನರಜನ್ಮದವರು ಅಲ್ಪಾಯುಷ್ಯದಲ್ಲಿ ಏನು ಮಾಡುವದು ಯುಕ್ತವೆಂದು ನಾನು ತಿಳಿದುಕೊಳ್ಳುವದಕ್ಕೋಸ್ಕರ ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಉತ್ತೇಜನಮಾಡುವದಕ್ಕೂ ಬುದ್ಧಿಹೀನತೆಯನ್ನು ಅವಲಂಬಿಸುವದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.


ಆತನಿಲ್ಲದೆ ಯಾರು ಭೋಜನಮಾಡಿ ಸುಖವನ್ನನುಭವಿಸಾರು?


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವದು ಮೇಲೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವದೆಂದು ಅವನು ಯಾರಿಂದ ತಿಳಿದುಕೊಂಡಾನು?


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.


ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.


ಅವನ ಜೀವಮಾನವೆಲ್ಲಾ ಅವನ ಊಟದಲ್ಲಿ ಕತ್ತಲು ಕವಿದಿರುವದು; ಅವನಿಗೆ ಕರಕರೆಯು ಶಾನೆ; ರೋಗರೋಷಗಳು ಇದ್ದೇ ಇರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು