ಪ್ರಸಂಗಿ 2:3 - ಕನ್ನಡ ಸತ್ಯವೇದವು J.V. (BSI)3 ಆಕಾಶದ ಕೆಳಗೆ ನರಜನ್ಮದವರು ಅಲ್ಪಾಯುಷ್ಯದಲ್ಲಿ ಏನು ಮಾಡುವದು ಯುಕ್ತವೆಂದು ನಾನು ತಿಳಿದುಕೊಳ್ಳುವದಕ್ಕೋಸ್ಕರ ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಉತ್ತೇಜನಮಾಡುವದಕ್ಕೂ ಬುದ್ಧಿಹೀನತೆಯನ್ನು ಅವಲಂಬಿಸುವದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮನುಷ್ಯರು ತಮ್ಮ ಕ್ಷಣಿಕ ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಭಿಸಿಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ. ಅಧ್ಯಾಯವನ್ನು ನೋಡಿ |