Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:5 - ಕನ್ನಡ ಸತ್ಯವೇದವು J.V. (BSI)

5 ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿ ಅವುಗಳಲ್ಲಿ ಸಕಲವಿಧವಾದ ಫಲವೃಕ್ಷಗಳನ್ನು ನಾಟಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ತೋಟ ಉದ್ಯಾನವನಗಳನ್ನು ಬೆಳೆಸಿದೆ. ಅವುಗಳಲ್ಲಿ ನಾನಾ ತರದ ಫಲವೃಕ್ಷಗಳನ್ನು ನಾಟಿಮಾಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿದೆ; ಎಲ್ಲಾ ಬಗೆಯ ಹಣ್ಣಿನ ಮರಗಳನ್ನು ನೆಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನು ಉದ್ಯಾನವನಗಳನ್ನೂ, ತೋಟಗಳನ್ನೂ ಮಾಡಿಕೊಂಡು, ಅವುಗಳಲ್ಲಿ ಸಕಲ ವಿಧವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:5
10 ತಿಳಿವುಗಳ ಹೋಲಿಕೆ  

ಯೆಹೂದದ ಅರಸನಾದ ಚಿದ್ಕೀಯನೂ ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನಮಾಡಿದರು.


ನನ್ನ ಕಾಂತನು ಉದ್ಯಾನಗಳಲ್ಲಿ [ಮಂದೆಯನ್ನು] ಮೇಯಿಸುತ್ತಾ ನೆಲದಾವರೆಗಳನ್ನು ಕೊಯ್ಯಬೇಕೆಂದು ಸುಗಂಧಸಸ್ಯದ ಪಾತಿಗಳಿರುವ ತನ್ನ ತೋಟಕ್ಕೆ ಹೋಗಿದ್ದಾನೆ.


ನನ್ನ ಪ್ರಿಯಳು, ನನ್ನ ಮದಲಗಿತ್ತಿಯು, ಅಗುಳಿ ಹಾಕಿದ ಉದ್ಯಾನ, ಬೇಲಿಯೊಳಗಿನ ಬುಗ್ಗೆ, ಮುಚ್ಚಿ ಮುದ್ರಿಸಿದ ಬಾವಿ ಆಗಿದ್ದಾಳೆ.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ


ನಿನ್ನ ಉದ್ಯಾನದಲ್ಲಿ ದಾಳಿಂಬರದ ವನ, ಉತ್ತಮಫಲ, ಜಟಾಮಾಂಸಿ, ಗೋರಂಟೆ,


ಬಡಗಣ ಗಾಳಿಯೇ ಬೀಸು, ತೆಂಕಣ ಗಾಳಿಯೇ ಬಾ! ನನ್ನ ತೋಟದ ಸುಗಂಧಗಳು ಹರಡುವ ಹಾಗೆ ಅದರ ಮೇಲೆ ಸುಳಿದಾಡು. ಎನ್ನಿನಿಯನು ತನ್ನ ತೋಟದೊಳಗೆ ಸೇರಿ ತನ್ನ ಉತ್ತಮ ಫಲಗಳನ್ನು ತಾನೇ ಭುಜಿಸಲಿ.


ಪ್ರಿಯಳೇ, ವಧುವೇ, ಇಗೋ ನನ್ನ ತೋಟದೊಳಗೆ ಬಂದೆನು, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ತೆಗೆದೆನು, ನನ್ನ ಜೇನುಕೊಡವನ್ನೂ ಜೇನುತುಪ್ಪವನ್ನೂ ತಿಂದೆನು, ನನ್ನ ದ್ರಾಕ್ಷಾರಸವನ್ನೂ ಕ್ಷೀರವನ್ನೂ ಕುಡಿದೆನು. ವಿುತ್ರರೇ, ಊಟಮಾಡಿರಿ; ಪ್ರಿಯರೇ, ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು