Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:6 - ಕನ್ನಡ ಸತ್ಯವೇದವು J.V. (BSI)

6 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವದಕ್ಕೆ ಕುಂಟೆಗಳನ್ನು ತೆಗೆಯಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬೆಳೆಯುವ ಗಿಡತೋಟಗಳಿಗೆ ನೀರುಹಾಯಿಸಲು ಕೆರೆಕುಂಟೆಗಳನ್ನು ತೋಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀರಿನ ಕೊಳಗಳನ್ನು ಮಾಡಿಸಿ ಮರಗಳಿಗೆ ನೀರನ್ನು ಹಾಯಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕೆ ನಾನು ಜಲಾಶಯಗಳನ್ನು ಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:6
7 ತಿಳಿವುಗಳ ಹೋಲಿಕೆ  

ಅಲ್ಲಿಂದ ಬುಗ್ಗೆಬಾಗಲನ್ನು ಹಾದು ಅರಸನ ಕೊಳಕ್ಕೆ ಹೋದೆನು.


ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.


ನಿನ್ನ ಕಂಠವು ದಂತದ ಗೋಪುರ; ನಿನ್ನ ನೇತ್ರಗಳು ಹೆಷ್ಬೋನಿನಲ್ಲಿನ ಬತ್‍ರಬ್ಬೀಮ್ ಬಾಗಿಲ ಬಳಿಯ ಕೊಳಗಳಂತಿವೆ. ನಿನ್ನ ನಾಸಿಕವು ದಮಸ್ಕದ ಕಡೆಗಿರುವ ಲೆಬನೋನಿನ ಬುರುಜಿನ ಹಾಗಿದೆ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ


ಬುಗ್ಗೆಬಾಗಲನ್ನು ಜೀರ್ಣೋದ್ಧಾರ ಮಾಡಿದವನು ವಿುಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಸಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ಇವನ ಆಚೆ ಅಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು