ಪ್ರಸಂಗಿ 2:7 - ಕನ್ನಡ ಸತ್ಯವೇದವು J.V. (BSI)7 ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆನು; [ಇವರಿಂದ] ಹುಟ್ಟು ಗುಲಾಮರು ಉಂಟಾದರು; ಇದಲ್ಲದೆ ಯೆರೂಸಲೇವಿುನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಲು ದನಕುರಿಗಳ ಧನವುಳ್ಳವನಾದೆನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆ. ಇವರಿಗಾದ ಮಕ್ಕಳು ನನಗೆ ಹುಟ್ಟುಗುಲಾಮರಾದರು. ಇದಲ್ಲದೆ ಜೆರುಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ದನಕುರಿಗಳು ನನಗಾದವು; ನಾನು ಧನವಂತನಾದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನಗೆ ದಾಸ, ದಾಸಿಯರನ್ನು ಕೊಂಡುಕೊಂಡೆನು. ನನ್ನ ಮನೆಯಲ್ಲಿ ಜನಿಸಿದ ಇತರ ಗುಲಾಮರು ಸಹ ಇದ್ದರು. ನನಗಿಂತ ಮುಂಚೆ ಯೆರೂಸಲೇಮಿನಲ್ಲಿ, ಇದ್ದವರೆಲ್ಲರಿಗಿಂತಲೂ ಹೆಚ್ಚಾಗಿ ಬಹಳ ಸಂಪತ್ತು ಉಳ್ಳವನಾಗಿ ಹೆಚ್ಚು ದನಕುರಿಗಳ ಮಂದೆಗಳನ್ನು ಹೊಂದಿದೆನು. ಅಧ್ಯಾಯವನ್ನು ನೋಡಿ |