ಪ್ರಸಂಗಿ 3:14 - ಕನ್ನಡ ಸತ್ಯವೇದವು J.V. (BSI)14 ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |