Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:1 - ಕನ್ನಡ ಸತ್ಯವೇದವು J.V. (BSI)

1 ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:1
51 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ಲೋಕವನ್ನು ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ ಧರ್ಮಸ್ಥಾನದಲ್ಲಿಯೂ ಅಧರ್ಮವಿರುವದೆಂದು ನೋಡಿದೆನು.


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುವದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಗೆ ವಿುತ್ರರೆಲ್ಲಾ ಶತ್ರುಗಳಾಗಿ ದ್ರೋಹ ಮಾಡಿದ್ದಾರೆ,


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ.


ನಾನು ನನ್ನ ಶರಣನಿಗೆ - ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು ಎಂದು ಮೊರೆಯಿಡುವೆನು.


ನಿನ್ನ ದೇವರು ಎಲ್ಲಿ ಎಂದು ಜನರು ಯಾವಾಗಲೂ ನನ್ನನ್ನು ಗೇಲಿ ಮಾಡುವದರಿಂದ ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.


ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.


ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರೇ ಹೊರತು


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;


ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ಇನ್ನೊಂದನ್ನು ನಡಿಸುತ್ತೀರಿ - ಯೆಹೋವನ ಯಜ್ಞವೇದಿಯನ್ನು ಕಣ್ಣೀರಿನಿಂದಲೂ ಅಳುವಿಕೆಯಿಂದಲೂ ನರಳಾಟದಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.


ಕಸುಕೊಳ್ಳುವದು ಜ್ಞಾನಿಗೆ ಬುದ್ಧಿಗೇಡು; ಲಂಚವು ವಿವೇಕನಾಶಕ.


ಬಡವರನ್ನು ಹಿಂಸಿಸುವ ದರಿದ್ರನು ಒಂದು ಕಾಳೂ ಉಳಿಯದಂತೆ [ಪೈರನ್ನು] ಬಡಿಯುವ ಮಳೆಯ ಹಾಗೆ.


ನನ್ನ ಬಲಗಡೆಗೆ ನೋಡಿ ಪರಾಂಬರಿಸು; ಅಲ್ಲಿ ಸಹಾಯಕರು ಯಾರೂ ಇಲ್ಲ. ಆಶ್ರಯವು ನಾಶವಾಯಿತು; ನನ್ನ ಪ್ರಾಣಕ್ಕೆ ಹಿತಚಿಂತಕರು ಒಬ್ಬರೂ ಇಲ್ಲ.


ರೋದನವೇ ಅವರ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಮಾಡಿದಿ.


ನಿಂದೆಯಿಂದ ಖಿನ್ನನಾಗಿ ಕುಂದಿಹೋಗಿದ್ದೇನೆ. ಕರುಣಾಳುಗಳನ್ನು ನಿರೀಕ್ಷಿಸಿದೆ; ದೊರೆಯಲಿಲ್ಲ. ಸಂತೈಸುವವರನ್ನು ಹಾರೈಸಿದೆ; ಸಿಕ್ಕಲಿಲ್ಲ.


ನಾನೂ ನಿಮ್ಮ ಹಾಗೆ ಮಾತಾಡಬಲ್ಲೆನು; ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ ನಾನು ನಿಮಗೆ ವಿರುದ್ಧವಾಗಿ ಮಾತುಗಳನ್ನು ಹೊಸೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.


ದಯವಿಟ್ಟು ನನ್ನ ವಿಚಾರಣೆಗೆ ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆಗೆ ತಿರುಗಿಕೊಳ್ಳಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಆಗ ನೀವು ಹಸಿವು ಬಾಯಾರಿಕೆಗಳುಳ್ಳವರಾಗಿ ಬಟ್ಟೆಯೂ ಏನೂ ಇಲ್ಲದೆ ಆ ಶತ್ರುಗಳಿಗೇ ಸೇವಕರಾಗಬೇಕಾಗುವದು. ಆತನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ತರುವಾಯ ಫರೋಹನು ತನ್ನ ಜನರಿಗೆಲ್ಲಾ - [ಇಬ್ರಿಯರ] ಗಂಡುಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು ಎಂದು ಆಜ್ಞೆ ಮಾಡಿದನು.


ಅವರಿಗೆ - ನೀವು ಇಬ್ರಿಯರ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವದು ಗಂಡುಮಗುವಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು ಎಂದು ಹೇಳಿದನು.


ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು; ಹೌದು, ವಿುತ್ರರೂ ಅವನಿಗೆ ದೂರವಾಗುವರು. [ಅವರ] ಬರೀ ಮಾತುಗಳನ್ನು [ನಂಬಿ] ಹಿಂಬಾಲಿಸಿದರೆ ಏನೂ ಸಿಕ್ಕದು.


ಒಬ್ಬನು ಮತ್ತೊಬ್ಬನ ಮೇಲೆ ಅಧಿಕಾರ ನಡಿಸಿ ಅವನಿಗೆ ಹಾನಿಯನ್ನುಂಟುಮಾಡುವ ಈ ಕಾಲದಲ್ಲಿ ಇದನ್ನೆಲ್ಲಾ ನೋಡಿ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ.


ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವದಕ್ಕಾಗಿ ಯಾರೂ ಕಜ್ಜಾಯವನ್ನು ಮುರಿದುಕೊಡರು; ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾಯಕ ಪಾನಪಾತ್ರೆಯನ್ನು ನೀಡರು.


ಈ ವಿಪತ್ತುಗಳಿಂದ ಅಳುವೆನು, ನನ್ನನ್ನು ಸಂತೈಸಿ ದಣುವಾರಿಸತಕ್ಕವನು ದೂರವಾಗಿರುವದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.


ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?


ನನಗೆ ಉಣ್ಣುವದಕ್ಕೆ ಕಹಿಯಾದ ವಸ್ತುವನ್ನೂ ಬಾಯಾರಿದಾಗ ಹುಳಿತ ದ್ರಾಕ್ಷಾರಸವನ್ನೂ ಕೊಟ್ಟರು.


ಯೆಹೋವನೇ, ನಾನು ನಿನಗೆ - ನೀನೇ ನನ್ನ ಶರಣನೂ ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದೀ ಎಂದು ಕೂಗಿ ಮೊರೆಯಿಟ್ಟಿದ್ದೇನೆ.


ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ; ದುಷ್ಟನ ಆಳಿಕೆ ಜನರಿಗೆ ನರಳಾಟ.


ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.


ಅಷ್ಡೋದಿನ ಅರಮನೆಗಳಲ್ಲಿಯೂ ಐಗುಪ್ತದೇಶದ ಸೌಧಗಳಲ್ಲಿಯೂ ಹೀಗೆ ಪ್ರಕಟಿಸಿರಿ - ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ, ಪಟ್ಟಣದೊಳಗೆ ಎಷ್ಟೆಷ್ಟೋ ಗದ್ದಲಗಳೂ ಹಿಂಸೆಗಳೂ ನಡೆಯುತ್ತವೆ ನೋಡಿರಿ.


ತಮ್ಮ ಉಪ್ಪರಿಗೆಗಳಲ್ಲಿ ಬಾಧೆಕೊಳ್ಳೆಗಳಿಂದ ಸಂಪಾದಿಸಿದ್ದನ್ನು ಕೂಡಿಸಿಟ್ಟುಕೊಂಡಿರುವವರು ನ್ಯಾಯವಾಗಿ ನಡೆಯಲು ಅರಿಯರು; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು