Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:10 - ಕನ್ನಡ ಸತ್ಯವೇದವು J.V. (BSI)

10 ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು; ಬಿದ್ದಾಗ ಎತ್ತುವವನು ಇನ್ನೊಬ್ಬನಿಲ್ಲದಿದ್ದರೆ ಅವನ ಗತಿ ದುರ್ಗತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುತ್ತಾನೆ; ಬಿದ್ದಾಗ ಎತ್ತುವವನು ಇಲ್ಲದಿದ್ದರೆ ಅವನ ಗತಿ ದುರ್ಗತಿಯೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಬಿದ್ದಾಗ ಒಬ್ಬಂಟಿಗನಾಗಿದ್ದರೆ ಎತ್ತಲು ಯಾರೂ ಇಲ್ಲದಿರುವುದರಿಂದ ಅವನಿಗೆ ದುರ್ಗತಿಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ ಅವನ ಗತಿ ದುರ್ಗತಿಯೇ ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:10
17 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಸಂತೈಸಿಕೊಳ್ಳುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರ್ರಿ.


ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಆಗ ಸೌಲನ ಮಗನಾದ ಯೋನಾತಾನನು ಅಲ್ಲಿಗೆ ಹೋಗಿ ದಾವೀದನಿಗೆ -


ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು; ಅಲ್ಲಿ ಬಿಡಿಸುವವರಾರೂ ಇರಲಿಲ್ಲವಾದದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರತರಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು; ಆಕೆಯು ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯವು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಒಳ್ಳೆಯ ಲಾಭ.


ಮತ್ತು ಒಬ್ಬನ ಮಗ್ಗುಲಲ್ಲೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾಗುವದು; ಒಂಟಿಗನಿಗೆ ಹೇಗೆ ಬೆಚ್ಚಗಾದೀತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು