Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:14 - ಕನ್ನಡ ಸತ್ಯವೇದವು J.V. (BSI)

14 ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ತರಲ್ಪಟ್ಟನು; ಹೌದು, ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಂಥ ಯುವಕನೊಬ್ಬನನ್ನು ರಾಜನನ್ನಾಗಿಸಲು ಸೆರೆಮನೆಯಿಂದ ಕರೆ ತರಲಾಯಿತು. ರಾಜ್ಯದಲ್ಲಿ ಒಬ್ಬ ಬಡ ಪ್ರಜೆಯಾಗಿ ಹುಟ್ಟಿದವನು ಆತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಬಡಯುವಕನು ದೇಶದ ಒಂದು ಬಡಕುಟುಂಬದಲ್ಲಿ ಹುಟ್ಟಿದ್ದಿರಬಹುದು ಅಥವಾ ದೇಶವನ್ನು ಆಳುವುದಕ್ಕಾಗಿ ಸೆರೆಮನೆಯಿಂದ ಬಿಡುಗಡೆ ಮಾಡಲ್ಪಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:14
15 ತಿಳಿವುಗಳ ಹೋಲಿಕೆ  

ಫರೋಹನು ಇದನ್ನು ಕೇಳಿ ಯೋಸೇಫನನ್ನು ಕರೇ ಕಳುಹಿಸಿದನು. ಯೋಸೇಫನು ಬೇಗನೆ ಸೆರೆಮನೆಯಿಂದ ಬಿಡಿಸಲ್ಪಟ್ಟವನಾಗಿ ಕ್ಷೌರಮಾಡಿಸಿಕೊಂಡು ಬೇರೆ ವಸ್ತ್ರಗಳನ್ನು ಹಾಕಿಕೊಂಡು ಫರೋಹನ ಸನ್ನಿಧಿಗೆ ಬಂದನು.


ಹೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ಏರಿಸಿ ದುಃಖಿಸುವವರನ್ನು ನಿರಪಾಯಸ್ಥಳಕ್ಕೆ ಹತ್ತಿಸುತ್ತಾನೆ.


ಈ ಮಾತು ರಾಜನ ಬಾಯಿಂದ ಹೊರಡುತ್ತಿರುವಾಗ - ಅರಸನಾದ ನೆಬೂಕದ್ನೆಚ್ಚರನೇ, ನಿನಗಾದ ದೈವೋಕ್ತಿಯನ್ನು ಕೇಳು;


ಯಾವನು ನಮಗೆ ಜೀವಶ್ವಾಸವೋ, ಯಾವನು ಯೆಹೋವನ ಅಭಿಷಿಕ್ತನೋ ಯಾವನನ್ನು ಆಶ್ರಯಿಸಿ ಜನಾಂಗಗಳ ಮಧ್ಯದಲ್ಲಿ ಉಳಿಯುವೆವು ಎಂದು ನಾವು ನಂಬಿಕೊಂಡಿದ್ದೆವೋ ಅವನು ಅವರ ಗುಂಡಿಗಳಲ್ಲಿ ಸಿಕ್ಕಿಬಿದ್ದನು.


ಅವನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ವಧಿಸಿ ಅವನಿಗೆ ಬೇಡಿ ಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬೆಲಿಗೆ ತೆಗೆದುಕೊಂಡು ಹೋದರು.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿ ಪರಿವಾರದವರು ಸೇನಾಪತಿಗಳು ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು; ಅವನು ಇವನನ್ನು ತನ್ನ ಆಳಿಕೆಯ ಎಂಟನೆಯ ವರುಷದಲ್ಲಿ ಸೆರೆಹಿಡಿದನು.


ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.


ಸೂರ್ಯನ ಕೆಳಗೆ ಚಲಿಸುವ ಜೀವಂತರೆಲ್ಲಾ ರಾಜನಿಗೆ ಪ್ರತಿಯಾಗಿ ನಿಂತ ಯುವಕನಾದ ಈ ಎರಡನೆಯವನ ಪಕ್ಷ ವಹಿಸುವದನ್ನು ನೋಡಿದೆನು.


ಆತನು ದೀನನನ್ನು ಧೂಳಿಯಿಂದ ಎತ್ತಿ ದರಿದ್ರನನ್ನು ತಿಪ್ಪೆಯಿಂದ ಎಬ್ಬಿಸಿ ಪ್ರಭುಗಳೊಂದಿಗೆ ಕುಳ್ಳಿರಿಸಿ ಅವನಿಗೆ ಮಹಿಮಾಸನವನ್ನು ಬಾಧ್ಯತೆಯಾಗಿ ಅನುಗ್ರಹಿಸುವವನಾಗಿದ್ದಾನೆ. ಭೂವಿುಯ ಆಧಾರಸ್ತಂಭಗಳು ಯೆಹೋವನವೇ; ಆತನೇ ಅವುಗಳ ಮೇಲೆ ಭೂಮಂಡಲವನ್ನು ಸ್ಥಾಪಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು