Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:5 - ಕನ್ನಡ ಸತ್ಯವೇದವು J.V. (BSI)

5 ಮೂಢನು ಅಪ್ಪುಗೈ ಮಾಡಿಕೊಂಡು ತನ್ನ ಮಾಂಸವನ್ನು ತಾನೇ ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ, ತನ್ನನ್ನು ತಾನು ನಾಶಪಡಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕೈಕಟ್ಟಿಕೊಂಡು ಕುಳಿತುಕೊಳ್ಳುವ ಮೈಗಳ್ಳನಾದ ಮೂಢನಿಗೆ ಅವನ ಒಡಲೇ ಊಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕೆಲವರು ಹೇಳುವಂತೆ, “ಏನೂ ಮಾಡದೆ ಕೈಕಟ್ಟಿಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:5
10 ತಿಳಿವುಗಳ ಹೋಲಿಕೆ  

ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು [ತಿಂದರೂ] ಹಸಿದೇ ಇರುತ್ತಾರೆ; ಎಡಗಡೆಯಲ್ಲಿರುವದನ್ನು ಉಂಡರೂ ತೃಪ್ತಿಗೊಳ್ಳರು; ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುತ್ತಾನೆ.


ಮೈಗಳ್ಳನು ಮಳೆಗಾಲದಲ್ಲಿ ಹೊಲಗೇಯನು; ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?


ಸೋಮಾರಿಯ ಆಶೆಯು ವ್ಯರ್ಥ; ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.


ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು,


ಮೈಗಳ್ಳನು ಹಿಡಿದ ಬೇಟೆಯನ್ನೂ ಬೇಯಿಸನು; ಚಟುವಟಿಕೆಯವನಿಗೆ ಅಮೂಲ್ಯಸಂಪತ್ತು ದೊರಕುವದು.


ಪರೋಪಕಾರವು ತನಗೂ ಉಪಕಾರ; ಕ್ರೂರನು ತನ್ನ ಶರೀರವನ್ನೂ ಹಿಂಸಿಸುವನು.


ಜ್ಞಾನಿಯ ಮಾತು ಹಿತ; ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವದು.


ಸೋಮಾರಿಯೇ, ಎಷ್ಟು ಹೊತ್ತು ನಿದ್ರೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು