Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:6 - ಕನ್ನಡ ಸತ್ಯವೇದವು J.V. (BSI)

6 ಗಾಳಿಯನ್ನು ಹಿಂದಟ್ಟುವ ವ್ಯರ್ಥ ಪ್ರಯಾಸದ ಬೊಗಸೆಗಿಂತಲೂ ನೆಮ್ಮದಿಯ ಸೇರೆಯೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದೇನೊ ನಿಜವಿರಬಹುದು. ಆದರೆ ದುರಾಶೆಪಡುವುದಕ್ಕಿಂತ ಇರುವುದರಲ್ಲಿ ತೃಪ್ತರಾಗಿರುವುದೇ ಮೇಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಿಂದ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:6
7 ತಿಳಿವುಗಳ ಹೋಲಿಕೆ  

ಅನ್ಯಾಯದಿಂದ ಗಳಿಸಿದ ಬಹು ಧನಕ್ಕಿಂತಲೂ ನ್ಯಾಯದಿಂದ ಕೂಡಿಸಿದ ಅಲ್ಪ ಧನವೇ ಲೇಸು.


ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.


ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ ಸಮಾಧಾನದ ಒಣತುತ್ತೇ ಮೇಲು.


ಜ್ಞಾನವನ್ನಲ್ಲದೆ ಮರುಳುತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಲು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ಎಂದು ಅರಿತುಕೊಂಡೆನು.


ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.


ಲೋಕದಲ್ಲಿ ನಡೆಯುವ ಕೆಲಸಗಳನ್ನೆಲ್ಲಾ ನೋಡಿದ್ದೇನೆ; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು