Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:1 - ಕನ್ನಡ ಸತ್ಯವೇದವು J.V. (BSI)

1 ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:1
28 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.


ಯೆಹೋವನ ಸೇನಾಪತಿಯು - ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು ಎಂದು ಯೆಹೋಶುವನಿಗೆ ಹೇಳಿದನು. ಅವನು ಹಾಗೆಯೇ ಮಾಡಿದನು.


ದೇವರು ಅವನಿಗೆ - ನೀನು ಹತ್ತಿರ ಬರಬೇಡ; ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು ಎಂದು ಹೇಳಿದನು.


ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ;


ಏನು, ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವದಿಲ್ಲ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಆ ಸಭೆಯವರು ಥೆಸಲೋನಿಕದವರಿಗಿಂತ ಸದ್ಗುಣವುಳ್ಳವರಾಗಿದ್ದು ದೇವರ ವಾಕ್ಯವನ್ನು ಶುದ್ಧಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಏನೋ ಎಂಬ ವಿಷಯದಲ್ಲಿ ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದರು.


ನಾನು ತಡಮಾಡದೆ ನಿನ್ನ ಹತ್ತರ ಕಳುಹಿಸಿದೆನು. ನೀನು ಬಂದದ್ದು ಉಪಕಾರವಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಆದರೆ ಅವನು ಬಲಿಷ್ಠನಾದ ಮೇಲೆ ಗರ್ವಿಷ್ಠನಾಗಿ ಭ್ರಷ್ಟನಾದನು; ತನ್ನ ದೇವರಾದ ಯೆಹೋವನಿಗೆ ದ್ರೋಹಿಯಾಗಿ ಧೂಪವೇದಿಯ ಮೇಲೆ ತಾನೇ ಧೂಪ ಹಾಕಬೇಕೆಂದು ಯೆಹೋವನ ಆಲಯದೊಳಕ್ಕೆ ಹೋದನು.


ಸ್ನಾನಕ್ಕೋಸ್ಕರ ಒಂದು ತಾಮ್ರದ ಗಂಗಾಳವನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.


ಬಹಳ ಮಾತುಗಳಿಗೆ ಉತ್ತರಕೊಡಬಾರದೋ? ಹರಟೇಮಲ್ಲನು ನೀತಿವಂತನೆಂದು ಹೇಳಿಸಿಕೊಂಡಾನೇ?


ದೇವರು ಉನ್ನತಾಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!


ಮಾತಾಳಿಗೆ ಪಾಪ ತಪ್ಪದು; ಮೌನಿಯು ಮತಿವಂತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು