Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:16 - ಕನ್ನಡ ಸತ್ಯವೇದವು J.V. (BSI)

16 ಬಂದಂತೆಯೇ ಗತಿಸುವನು; ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು? ಇದೇ ಕೇವಲ ದುರ್ದಶೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಂದಂತೆಯೇ ಹಿಂದಿರುಗಿ ಹೋಗುವನು. ಅವನು ಪಟ್ಟ ಪ್ರಯಾಸವೆಲ್ಲ ಗಾಳಿಗೆ ತೂರಿದಂತೆ ನಿರರ್ಥಕ, ಇದು ದುರದೃಷ್ಟಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅದು ಸಹ ತುಂಬ ದುಃಖಕರ. ಅವನು ಬಂದ ರೀತಿಯಲ್ಲಿಯೇ ಈ ಲೋಕವನ್ನು ಬಿಟ್ಟುಹೋಗುವನು. “ಗಾಳಿಯನ್ನು ಹಿಂದಟ್ಟುವುದರಿಂದ” ಅವನಿಗಾಗುವ ಪ್ರಯೋಜನವೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದು ಕೂಡ ವ್ಯಸನಕರವಾದ ಕೇಡು: ಮನುಷ್ಯನು ಹೇಗೆ ಬಂದನೋ, ಹಾಗೆಯೇ ಹೋಗುವನು. ಗಾಳಿಗಾಗಿ ಪ್ರಯಾಸಪಟ್ಟವನಿಗೆ ಲಾಭವೇನಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:16
13 ತಿಳಿವುಗಳ ಹೋಲಿಕೆ  

ಮನುಷ್ಯನು ಈ ಲೋಕದಲ್ಲಿ ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಏನು ಲಾಭ?


ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು; ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು?


ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲಿಗಾಗಿ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟುಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.


ಯಾಜಕರಿಗೆ ಯೆಹೋವನು ಎಲ್ಲಿ ಎಂಬ ವಿಚಾರವೇ ಇರಲಿಲ್ಲ, ಧರ್ಮೋಪದೇಶಕರು ನನ್ನನ್ನು ತಿಳಿಯಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಸೇವಿಸಿದರು.


ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹಡೆದಂತಾಯಿತು, ದೇಶಕ್ಕೆ ನಮ್ಮಿಂದ ಯಾವ ಉದ್ಧಾರವೂ ಆಗಲಿಲ್ಲ, ನಮ್ಮೊಳಗೆ ಯಾವ ಭೂನಿವಾಸಿಗಳೂ ಹುಟ್ಟಲಿಲ್ಲ.


ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು;


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿರಿ; ಅವುಗಳಿಂದ ನಿಮಗೆ ಲಾಭವೂ ರಕ್ಷಣೆಯೂ ಸಿಕ್ಕುವದಿಲ್ಲ. ಅವು ವ್ಯರ್ಥವಾದವುಗಳೇ.


ಸಹೋದರರೇ, ನೀವು ಇಂಥವರಿಗೂ ಕೆಲಸದಲ್ಲಿ ಸಹಾಯಮಾಡುತ್ತಾ ಪ್ರಯಾಸಪಡುತ್ತಾ ಇರುವವರೆಲ್ಲರಿಗೂ ಒಳಗಾಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆಗ ನನ್ನ ಕೈಯಿಂದ ನಡಿಸಿದ ಎಲ್ಲಾ ಕೆಲಸಗಳಲ್ಲಿಯೂ ನಾನು ಪಟ್ಟ ಪ್ರಯಾಸದಲ್ಲಿಯೂ ದೃಷ್ಟಿಯಿಟ್ಟೆನು; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥವಾಯಿತು, ಲೋಕದಲ್ಲಿ ಯಾವ ಲಾಭವೂ ಕಾಣಲಿಲ್ಲ.


ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು