ಪ್ರಸಂಗಿ 5:17 - ಕನ್ನಡ ಸತ್ಯವೇದವು J.V. (BSI)17 ಅವನ ಜೀವಮಾನವೆಲ್ಲಾ ಅವನ ಊಟದಲ್ಲಿ ಕತ್ತಲು ಕವಿದಿರುವದು; ಅವನಿಗೆ ಕರಕರೆಯು ಶಾನೆ; ರೋಗರೋಷಗಳು ಇದ್ದೇ ಇರುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ತನ್ನ ಜೀವಮಾನವೆಲ್ಲಾ ಕತ್ತಲೆಯಲ್ಲಿ ಜೀವಿಸುವನು. ಅವನ ರೋಗದೊಂದಿಗೆ ಅವನಿಗೆ ಬಹಳ ರೋಷವೂ ವ್ಯಥೆಯೂ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವನ ಜೀವಮಾನವೆಲ್ಲಾ ವ್ಯಸನದಿಂದಲೂ ದುಃಖದಿಂದಲೂ ಕೂಡಿದೆ. ನಿರಾಶೆಯೂ ಕಾಯಿಲೆಯೂ ಕೋಪವೂ ಅವನನ್ನು ಕಾಡುತ್ತಲೇ ಇರುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ. ಅಧ್ಯಾಯವನ್ನು ನೋಡಿ |
ಅದಕ್ಕೆ ಅವರು - ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ - ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ ಯೆಹೋವನ ಹೆಸರಿನಲ್ಲಿ ಅವನಿಗೆ - ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸಿಸುವದಕ್ಕೆ ಕಳುಹಿಸುವದೇನು? ಇಸ್ರಾಯೇಲ್ಯರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದಿಳಿಯದೆ ಸಾಯಲೇಬೇಕು ಎಂಬದಾಗಿ ಹೇಳಿರಿ ಎಂದು ಆಜ್ಞಾಪಿಸಿದನು ಎಂದು ಉತ್ತರಕೊಟ್ಟರು.
ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.