Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:6 - ಕನ್ನಡ ಸತ್ಯವೇದವು J.V. (BSI)

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ; ಇದು ಅಜಾಗ್ರತೆಯಿಂದಾಯಿತೆಂದು ದೂತನ ಮುಂದೆ ಹೇಳಬೇಡ; ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಗೆಲಸವನ್ನು ಏಕೆ ಹಾಳುಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಿಮ್ಮ ಮಾತುಗಳು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿ. “ನಾನು ಅಜಾಗ್ರತೆಯಿಂದ ಹೇಳಿದೆ” ಎಂದು ಯಾಜಕನಿಗೆ ತಿಳಿಸಬೇಡಿ. ಇಲ್ಲವಾದರೆ, ದೇವರು ನಿಮ್ಮ ಮಾತುಗಳಿಗೆ ಕೋಪಗೊಂಡು ನೀವು ದುಡಿದಿರುವುದನ್ನೆಲ್ಲಾ ನಾಶಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:6
23 ತಿಳಿವುಗಳ ಹೋಲಿಕೆ  

ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.


ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಯಾಜಕನು ಇಸ್ರಾಯೇಲ್ಯರ ಸರ್ವಸಮೂಹದವರಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆಯಾಗುವದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದನ್ನು ಪರಿಹರಿಸುವದಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮವನ್ನೂ ದೋಷಪರಿಹಾರಕಯಜ್ಞವನ್ನೂ ಮಾಡಿಸಿದ್ದರಿಂದ


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.


ಹೀಗಿರುವದರಿಂದ ದೂತರ ನಿವಿುತ್ತವಾಗಿ ಸ್ತ್ರೀಯು ಪುರುಷನ ಅಧಿಕಾರ ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ನೀನು ಇಸ್ರಾಯೇಲ್ಯರ ಸಂಗಡ ಮಾತಾಡಿ ಹೇಳಬೇಕಾದದ್ದೇನಂದರೆ - ಯಾವನೇ ಆಗಲಿ ತಿಳಿಯದೆ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ಮಾಡಿ ದೋಷಿಯಾದರೆ [ಅವನಿಗೆ ದೋಷಪರಿಹಾರ ಮಾಡುವ ಕ್ರಮ ಹೇಗಂದರೆ - ]


ಮುಖ್ಯಾಧಿಕಾರಿ ತನ್ನ ದೇವರಾಗಿರುವ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ; ಯೆಹೋವನಲ್ಲಿ ದಿನವೆಲ್ಲಾ ಭಯಭಕ್ತಿಯುಳ್ಳವನಾಗಿರು.


ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು.


ಜ್ಞಾನಿಯ ಮಾತು ಹಿತ; ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು