ಪ್ರಸಂಗಿ 6:12 - ಕನ್ನಡ ಸತ್ಯವೇದವು J.V. (BSI)12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವದು ಮೇಲೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಮೇಲೆಂದು ಯಾರಿಗೆ ಗೊತ್ತು? ತಾನು ಸತ್ತುಹೋದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು? ಅಧ್ಯಾಯವನ್ನು ನೋಡಿ |