ಪ್ರಸಂಗಿ 6:2 - ಕನ್ನಡ ಸತ್ಯವೇದವು J.V. (BSI)2 ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು. ಅಧ್ಯಾಯವನ್ನು ನೋಡಿ |