Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:6 - ಕನ್ನಡ ಸತ್ಯವೇದವು J.V. (BSI)

6 ಸಾವಿರದ ಮೇಲೆ ಸಾವಿರ ವರುಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ [ಏನು ಪ್ರಯೋಜನ?] ಇವೆರಡು ಒಂದೇ ಸ್ಥಳಕ್ಕೆ ಹೋಗುತ್ತವಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸಾವಿರ ವರ್ಷದ ಮೇಲೆ ಸಾವಿರ ವರ್ಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಇವೆರಡೂ ಒಂದೇ ಸ್ಥಳಕ್ಕೆ ಹೋಗುತ್ತವೆ, ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವನು ಎರಡು ಸಾವಿರ ವರ್ಷಗಳ ಕಾಲ ಬದುಕಿಯೂ ಜೀವನದಲ್ಲಿ ಸಂತೋಷಪಡದಿದ್ದರೆ ಏನು ಪ್ರಯೋಜನ? ಆ ಮಗುವೂ ಅವನೂ ಕತ್ತಲೆ ಗುಂಡಿಗೇ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಒಂದು ವೇಳೆ ಎರಡು ಸಾವಿರ ವರ್ಷಗಳು ಆ ಮನುಷ್ಯನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:6
18 ತಿಳಿವುಗಳ ಹೋಲಿಕೆ  

ಎಲ್ಲಾ ಪ್ರಾಣಿಗಳು ಒಂದೇ ಸ್ಥಳಕ್ಕೆ ಹೋಗುವವು; ಎಲ್ಲಾ ಮಣ್ಣಿನಿಂದಾದವು, ಎಲ್ಲಾ ಮಣ್ಣಿಗೆ ಪುನಃ ಸೇರುವವು.


ಒಂದೇ ಸಾರಿ ಸಾಯುವದೂ ಆಮೇಲೆ ನ್ಯಾಯತೀರ್ಪೂ ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ ಹಾಗೆಯೇ ಕ್ರಿಸ್ತನು ಸಹ ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತನಾದನು,


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭಸಂಭವಿಸಿದರೂ ಅದನ್ನು ಕಾಣನು; ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.


ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಪೂರಾ ಅನುಭವಿಸುವರು.


ಕೆಲವು ದಿವಸ ಮಾತ್ರ ಬದುಕತಕ್ಕ ಕೂಸಾಗಲಿ ವಯಸ್ಸಾಗದೆ ಮುದುಕನಾದವನಾಗಲಿ ಅಲ್ಲಿ ಇರುವದಿಲ್ಲ; ಯುವಕನು ನೂರು ವರುಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರುಷದೊಳಗೆ ಶಾಪತಗಲದು.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹು ವರುಷ ಬದುಕಿದವನಿಗೆ ಸುಖ ತೃಪ್ತಿಯೂ ಉತ್ತರಕ್ರಿಯೆಯೂ ಇಲ್ಲದಿದ್ದರೆ ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ದೀರ್ಘಾಯುಷ್ಯವು ಬೇಕೋ? ಬಹುದಿವಸ ಬದುಕಿ ಸುಖವನ್ನು ಅನುಭವಿಸಬೇಕೋ?


ಎಲೈ, ನನ್ನ ಜೀವವು ಗಾಳಿಯಂತಿದೆಯೆಂತಲೂ ನನ್ನ ಕಣ್ಣು ಇನ್ನೂ ಸುಖವನ್ನು ಕಾಣುವದಿಲ್ಲವೆಂತಲೂ ನೆನಪು ಮಾಡಿಕೋ.


ಏನೂ ಇಲ್ಲದವನಾಗಿ ತಾಯಿಯ ಗರ್ಭದಿಂದ ಬಂದೆನು; ಏನೂ ಇಲ್ಲದವನಾಗಿಯೇ ಗತಿಸಿ ಹೋಗುವೆನು; ಯೆಹೋವನೇ ಕೊಟ್ಟನು, ಯೆಹೋವನೇ ತೆಗೆದುಕೊಂಡನು; ಯೆಹೋವನ ನಾಮಕ್ಕೆ ಸ್ತೋತ್ರವಾಗಲಿ ಎಂದು ಹೇಳಿದನು.


ಅವನು ಒಟ್ಟು ಒಂಭೈನೂರ ಮೂವತ್ತು ವರುಷ ಬದುಕಿ ಸತ್ತನು.


ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವದು, ಮೂಢನು ಕತ್ತಲಲ್ಲಿ ನಡೆಯುವನು; ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡುಬಂತು.


ಅದು ಸೂರ್ಯನನ್ನು ಕಂಡಿಲ್ಲ, ಅದಕ್ಕೆ ತಿಳುವಳಿಕೆಯೇ ಇಲ್ಲ; ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.


ಜನನ ದಿನಕ್ಕಿಂತ ಮರಣ ದಿನ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವದು ಲೇಸು; ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ; ಜೀವಂತನು ಇದನ್ನು ನೋಡಿ ಸ್ಮರಿಸಿಕೊಳ್ಳುವನು.


ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವದು; ಶಿಷ್ಟನಿಗೂ ದುಷ್ಟನಿಗೂ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಯಜ್ಞಮಾಡುವವನಿಗೂ ಮಾಡದವನಿಗೂ ಒಂದೇ ಗತಿ; ನಿರ್ದೋಷಿಯಂತೆ ದೋಷಿಯಿರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನು ಇರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು