Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:7 - ಕನ್ನಡ ಸತ್ಯವೇದವು J.V. (BSI)

7 ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮನುಷ್ಯನು ಪಡುವ ಪ್ರಯಾಸವೆಲ್ಲಾ ತನ್ನ ಹೊಟ್ಟೆಗಾಗಿಯೇ, ಆದರೂ ಅವನಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮಾನವನು ಪಡುವ ಪ್ರಯಾಸವೆಲ್ಲ ಅವನ ಹೊಟ್ಟೆಪಾಡಿಗಾಗಿಯೇ. ಆದರೂ ಅವನಿಗೆ ತೃಪ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮನುಷ್ಯನು ದುಡಿಯುವುದೆಲ್ಲಾ ಊಟಕ್ಕಾಗಿಯೇ. ಆದರೂ ಅವನಿಗೆ ತೃಪ್ತಿಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ, ಆದರೆ ಅವನ ಹಸಿವು ತೃಪ್ತಿಹೊಂದುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:7
11 ತಿಳಿವುಗಳ ಹೋಲಿಕೆ  

ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ದುಡಿಯುವವನಿಗೆ ಅವನ ಹೊಟ್ಟೆಯೇ ದುಡಿಯುವದು; ಅವನನ್ನು [ದುಡಿಯಲಿಕ್ಕೆ], ಅವನ ಬಾಯೇ ಒತ್ತಾಯ ಮಾಡುವದು.


ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ.


ನನ್ನ ಜೀವಾತ್ಮಕ್ಕೆ - ಜೀವವೇ, ಅನೇಕ ವರುಷಗಳಿಗೆ ಬೇಕಾದಷ್ಟು ಸರಕು ನಿನಗೆ ಬಿದ್ದದೆ; ವಿಶ್ರವಿುಸಿಕೋ, ಊಟಮಾಡು, ಕುಡಿ, ಸುಖಪಡು ಎಂದು ಹೇಳುವೆನು ಅಂದುಕೊಂಡನು.


ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹು ವರುಷ ಬದುಕಿದವನಿಗೆ ಸುಖ ತೃಪ್ತಿಯೂ ಉತ್ತರಕ್ರಿಯೆಯೂ ಇಲ್ಲದಿದ್ದರೆ ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.


ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗದು; ಸಮೃದ್ಧಿಯನ್ನು ಬಯಸುತ್ತಲೇ ಇರುವವನಿಗೆ ಆದಾಯವೆಷ್ಟಾದರೂ ಸಾಲದು. ಇದು ಸಹ ವ್ಯರ್ಥ.


ಜ್ಞಾನಿಯಾಗಲಿ ಜನರ ಮುಂದೆ ಸರಿಯಾಗಿ ನಡೆಯಬಲ್ಲ ಬಡವನಾಗಲಿ ಮೂಢನಿಗಿಂತ ಯಾವ ವಿಷಯದಲ್ಲಿ ಶ್ರೇಷ್ಠ?


ಎಲ್ಲಾ ವಸ್ತುಗಳು ಬಳಲಿಹೋಗುವವು; ಇದನ್ನು ಮನುಷ್ಯನು ವಿವರಿಸಲಾರನು. ಕಣ್ಣು ನೋಡಿ ನೋಡಿ ತೃಪ್ತಿಗೊಳ್ಳದು, ಕಿವಿಯು ಕೇಳಿ ಕೇಳಿ ದಣಿಯದು.


ಭೂವಿುಯಿಂದ ಸರ್ವಕ್ಕೂ ಲಾಭವಿದೆ. ಹೊಲಗದ್ದೆಗಳಿಂದ ರಾಜನಿಗೂ ಸೇವೆಯಾಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು