ಪ್ರಸಂಗಿ 7:14 - ಕನ್ನಡ ಸತ್ಯವೇದವು J.V. (BSI)14 ಸುಖದ ದಿನದಲ್ಲಿ ಸುಖದಿಂದಿರು; ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವದನ್ನೂ ಗ್ರಹಿಸಲಾರದಂತೆ ದೇವರು ಇವುಗಳನ್ನು ದ್ವಂದ್ವ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೋ ಯಾರಿಗೂ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು. ಅಧ್ಯಾಯವನ್ನು ನೋಡಿ |