ಪ್ರಸಂಗಿ 7:16 - ಕನ್ನಡ ಸತ್ಯವೇದವು J.V. (BSI)16 ಧರ್ಮವನ್ನು ಅತಿಯಾಗಿ ಆಚರಿಸದಿರು; ಜ್ಞಾನವನ್ನು ಅಧಿಕವಾಗಿ ಆರ್ಜಿಸಬೇಡ; ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಧರ್ಮಿಷ್ಠನಾಗಿ ಬಾಳುವುದರಲ್ಲಿ ಆಗಲಿ, ಜ್ಞಾನಾರ್ಜನೆಯಲ್ಲಾಗಲಿ ಮಿತಿಮೀರಿ ವರ್ತಿಸಬೇಡ; ನಿನ್ನನ್ನು ನೀನೇ ವಿನಾಶಕ್ಕೆ ಗುರಿಮಾಡಿಕೊಳ್ಳಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16-17 ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ? ಅಧ್ಯಾಯವನ್ನು ನೋಡಿ |