Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:18 - ಕನ್ನಡ ಸತ್ಯವೇದವು J.V. (BSI)

18 ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು; ಅದರಿಂದಲೂ ಕೈದೆಗೆಯಬೇಡ; ದೇವರಲ್ಲಿ ಭಯಭಕ್ತಿಯುಳ್ಳವನು ಇವೆರಡರಿಂದಲೂ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:18
15 ತಿಳಿವುಗಳ ಹೋಲಿಕೆ  

ವಿಷಯವು ತೀರಿತು; ಎಲ್ಲವೂ ಕೇಳಿ ಮುಗಿಯಿತು; ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು; ಮನುಷ್ಯರೆಲ್ಲರ [ಕರ್ತವ್ಯವು] ಇದೇ.


ಅಯ್ಯೋ ಫರಿಸಾಯರೇ, ನೀವು ಮರುಗ ಸದಾಪು ಮುಂತಾದ ಸಕಲ ಪಲ್ಯಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಒತ್ತಟ್ಟಿಗೆ ಬಿಟ್ಟಿದ್ದೀರಿ; ಇವುಗಳನ್ನು ಮಾಡಬೇಕಾಗಿತ್ತು, ಅವುಗಳನ್ನೂ ಬಿಡಬಾರದು.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ತಲತಲಾಂತರದವರೆಗೂ ಇರುವದು.


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.


ಪಾಪಿಯು ನೂರು ಸಲ ಅಧರ್ಮಮಾಡಿ ಬಹುಕಾಲ ಬದುಕಿದರೂ ದೇವರ ಮುಂದೆ ಹೆದರಿ ಆತನಲ್ಲಿ ಭಯಭಕ್ತಿಯುಳ್ಳವರಿಗೆ ಮೇಲೇ ಆಗುವದೆಂದು ಬಲ್ಲೆನು.


ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು.


ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.


ಬಹಳ ಕನಸುಗಳಿಂದಲೂ ವ್ಯರ್ಥವಿಷಯಗಳಿಂದಲೂ ಹೆಚ್ಚು ಮಾತುಗಳು ಹೊರಡುತ್ತವಷ್ಟೆ; ನೀನಂತು ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ಆದರೆ ದುಷ್ಟನಿಗೆ ಮೇಲಾಗದು, ನೆರಳಿನಂತಿರುವ ಅವನ ದಿನಗಳು ಹೆಚ್ಚುವದಿಲ್ಲ; ಅವನು ದೇವರಿಗೆ ಹೆದರುವವನಲ್ಲವಷ್ಟೆ.


ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು; ದುರ್ಜನರಿಗೆ ಕೇಡು ತುಂಬಿತುಳುಕುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು