Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:20 - ಕನ್ನಡ ಸತ್ಯವೇದವು J.V. (BSI)

20 ಪಾಪಮಾಡದೆ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷನು ಲೋಕದಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:20
16 ತಿಳಿವುಗಳ ಹೋಲಿಕೆ  

ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ


ನನ್ನ ಹೃದಯವನ್ನು ಶುದ್ಧಮಾಡಿಕೊಂಡಿದ್ದೇನೆ; ನನ್ನ ಪಾಪವನ್ನು ಕಳೆದುಕೊಂಡು ನಿರ್ಮಲನಾಗಿದ್ದೇನೆ ಎಂದು ಯಾರು ಹೇಳಬಲ್ಲರು?


ಅವರು ನಿನಗೆ ವಿರುದ್ಧವಾಗಿ ಪಾಪಮಾಡಾರು; ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲವಲ್ಲಾ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಕರ್ತನೇ, ಯಾಹುವೇ, ನೀನು ಪಾಪಗಳನ್ನು ಎಣಿಸುವದಾದರೆ ನಿನ್ನ ಮುಂದೆ ಯಾರು ನಿಂತಾರು?


ಇಗೋ, ನೀನು ಹೀಗೆ ಆಡಿದ್ದು ನ್ಯಾಯವಲ್ಲವೆಂಬದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.


ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು; ಅವನು ಶುದ್ಧನು.


ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು; ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟ ಮಾಡಲೇ ಇಲ್ಲ.


ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯ ಕೃತ್ಯಗಳನ್ನು ನಡಿಸುತ್ತಾರೆ. ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಪ್ರತಿಯೊಬ್ಬನು ದಾರಿತಪ್ಪಿದವನು, ಎಲ್ಲರೂ ಕೆಟ್ಟುಹೋದವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು