Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:23 - ಕನ್ನಡ ಸತ್ಯವೇದವು J.V. (BSI)

23 ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಅದು ನನಗೆ ದೂರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಇದನ್ನೆಲ್ಲ ಜ್ಞಾನದಿಂದ ಪರೀಕ್ಷಿಸಿದೆ, ಜ್ಞಾನಿಯಾಗುತ್ತೇನೆಂದು ನಿರ್ಧರಿಸಿಕೊಂಡೆ. ಆದರೆ ಅದು ನನಗೆ ದೂರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನನ್ನ ಜ್ಞಾನದಿಂದ ಇವೆಲ್ಲವುಗಳ ಕುರಿತಾಗಿ ಆಲೋಚಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಆದರೆ ಅದು ಅಸಾಧ್ಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ, “ನಾನು ಜ್ಞಾನಿಯಾಗಿರಲು ತೀರ್ಮಾನಿಸುತ್ತೇನೆ,” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:23
9 ತಿಳಿವುಗಳ ಹೋಲಿಕೆ  

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.


ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.


ನೀವು ಇದರ ಹಣ್ಣನ್ನು ತಿಂದಾಗಲೇ ನಿಮ್ಮ ಕಣ್ಣುಗಳು ತೆರೆಯುವವು; ನೀವು ದೇವರಂತೆ ಆಗಿ ಒಳ್ಳೇದರ ಕೆಟ್ಟದ್ದರ ಭೇದವನ್ನು ಅರಿತವರಾಗುವಿರಿ; ಇದು ದೇವರಿಗೆ ಚೆನ್ನಾಗಿ ಗೊತ್ತುಂಟು ಅಂದಿತು.


ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ; ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ; ಆದರೂ ದೇವರು ಆದ್ಯಂತವಾಗಿ ನಡಿಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.


ನೀನೂ ಅನೇಕ ವೇಳೆ ಇತರರನ್ನು ಶಪಿಸಿದ್ದೀ ಎಂಬದಕ್ಕೆ ನಿನ್ನ ಮನಸ್ಸೇ ಸಾಕ್ಷಿ.


ಲೋಕದಲ್ಲಿ ನಡೆಯುವದನ್ನು ಮನುಷ್ಯನು ಗ್ರಹಿಸಲಾರನು, ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಗ್ರಹಿಸಲಾರನು; ಹೌದು, ಜ್ಞಾನಿಯು ಗ್ರಹಿಸಬಹುದೆಂದರೂ ಗ್ರಹಿಸಲಾರನು ಎಂಬದಾಗಿ ನಾನು ದೇವರ ಕೆಲಸವನ್ನೆಲ್ಲಾ ದೃಷ್ಟಿಸಿ ತಿಳಿದುಕೊಂಡೆನು.


ಜ್ಞಾನವನ್ನಲ್ಲದೆ ಮರುಳುತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಲು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ಎಂದು ಅರಿತುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು