ಪ್ರಸಂಗಿ 7:27 - ಕನ್ನಡ ಸತ್ಯವೇದವು J.V. (BSI)27 ಪ್ರಸಂಗಿಯು ಹೀಗೆ ಹೇಳುತ್ತಾನೆ - ನೋಡು, ನಾನು ತೀರ್ಮಾನವನ್ನು ನಿಶ್ಚಯಿಸಬೇಕೆಂದು ಒಂದೊಂದು ವಿಚಾರಿಸಿ ಒಂದು ವಿಷಯವನ್ನು ಕಂಡೆನು. ಎಷ್ಟು ಹುಡುಕುತ್ತಿದ್ದರೂ ಇದುವರೆಗೆ ಅದು ದೊರೆತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಪ್ರಸಂಗಿಯು ಹೀಗೆ ಹೇಳುತ್ತಾನೆ, “ನೋಡು, ನಾನು ಇದನ್ನು ಹುಡುಕಿ ಕಂಡುಕೊಂಡಿದ್ದೇನೆ” ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ಉತ್ತರ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಹೌದು, ಒಂದಾದ ಮೇಲೊಂದನ್ನು ಆಲೋಚಿಸಿ ನಾನು ಇದನ್ನು ಕಂಡುಹಿಡಿದೆ” ಎನ್ನುತ್ತಾನೆ ಉಪದೇಶಕ. ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ನನಗೆ ಉತ್ತರ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27-28 ಪ್ರಸಂಗಿಯು ಹೀಗೆನ್ನುತ್ತಾನೆ: “ಒಂದು ತೀರ್ಮಾನಕ್ಕೆ ಬರಬೇಕೆಂದು ಇವೆಲ್ಲವುಗಳನ್ನು ಒಟ್ಟಾಗಿ ಸೇರಿಸಿದೆ. ಆದರೂ ಒಂದು ತೀರ್ಮಾನಕ್ಕೆ ಬರಲಾಗುತ್ತಿಲ್ಲ. ಆದರೆ ನಾನು ಒಂದನ್ನು ಕಂಡುಕೊಂಡೆ. ಅದೇನೆಂದರೆ, ಸಾವಿರ ಪುರುಷರಲ್ಲಿ ಒಬ್ಬ ನೀತಿವಂತನು ಇದ್ದರೂ ಇರಬಹುದು; ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ನೀತಿವಂತಳನ್ನೂ ನಾನು ಕಾಣಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ನೋಡು, ನಾನಿದನ್ನು ಹುಡುಕಿ ಕಂಡುಕೊಂಡಿದ್ದೇನೆ,” ಎಂದು ಪ್ರಸಂಗಿಯು ಹೇಳುತ್ತಿದ್ದಾನೆ: ನಾನು ಒಂದರ ನಂತರ ಮತ್ತೊಂದನ್ನು ಕೂಡಿಸಿ, ಸಂಶೋಧನೆಗಳನ್ನು ನಡೆಸಿದೆ; ಅಧ್ಯಾಯವನ್ನು ನೋಡಿ |