ಪ್ರಸಂಗಿ 7:29 - ಕನ್ನಡ ಸತ್ಯವೇದವು J.V. (BSI)29 ನೋಡು, ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದನು, ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ; ಇದನ್ನು ಮಾತ್ರ ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ನಾನು ಮತ್ತೊಂದು ವಿಷಯವನ್ನು ತಿಳಿದುಕೊಂಡೆನು. ಅದೇನೆಂದರೆ, ದೇವರು ಮನುಷ್ಯರನ್ನು ನೀತಿವಂತರನ್ನಾಗಿ ಸೃಷ್ಟಿಸಿದನು. ಆದರೆ ಜನರು ಕೆಟ್ಟವರಾಗಿರಲು ಅನೇಕ ದಾರಿಗಳನ್ನು ಕಂಡುಕೊಂಡರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ: ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದರು. ಮನುಷ್ಯರಾದರೋ ಅನೇಕ ಸ್ವಾರ್ಥ ಯೋಜನೆಗಳನ್ನು ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |