Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:4 - ಕನ್ನಡ ಸತ್ಯವೇದವು J.V. (BSI)

4 ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ; ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದುಃಖದ ಮನೆಯು ಜ್ಞಾನಿಗಳ ಮನಸ್ಸಿಗೆ ನೆಲೆ, ಉಲ್ಲಾಸದ ಮನೆಯು ಮೂಢರ ಮನಸ್ಸಿಗೆ ನಿವಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜ್ಞಾನಿಯ ಹೃದಯ ಶೋಕದ ಆಲಯ; ಮೂಢನ ಹೃದಯ ಹಿಗ್ಗಿನ ನಿಲಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜ್ಞಾನಿಯು ಮರಣದ ಬಗ್ಗೆ ಆಲೋಚಿಸುವನು; ಮೂಢನಾದರೋ ಉಲ್ಲಾಸ ಸಮಯದ ಬಗ್ಗೆ ಆಲೋಚಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಜ್ಞಾನಿಗಳ ಹೃದಯವು ಶೋಕದ ಮನೆಯಲ್ಲಿರುವುದು, ಆದರೆ ಮೂಢರ ಹೃದಯವು ಉಲ್ಲಾಸದ ಮನೆಯಲ್ಲಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:4
21 ತಿಳಿವುಗಳ ಹೋಲಿಕೆ  

ನಮ್ಮ ರಾಜನ ವರ್ಧಂತಿಯ ದಿನದಲ್ಲಿ ದ್ರಾಕ್ಷಾರಸದ ಉಷ್ಣವು ದೇಶಾಧಿಪತಿಗಳ ತಲೆಗೇರಲು ಆರಂಭವಾಯಿತು; ರಾಜನು ಆ ತುಂಟರ ಕೈಯ ಮೇಲೆ ಕೈ ಹಾಕಿದನು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ಅವರು ಉರಿಗೊಂಡಿರುವಾಗ ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರ ಕುಡಿಸುವೆನು. ಇದು ಯೆಹೋವನ ನುಡಿ.


ನನ್ನ ಹೃದಯವು ಭ್ರಮೆಗೊಂಡಿದೆ, ನಡುಕವು ನನ್ನನ್ನು ಆಕ್ರವಿುಸಿದೆ, ನಾನು ಅಪೇಕ್ಷಿಸುತ್ತಿದ್ದ ಸಂಜೆಹೊತ್ತೇ ನನಗೆ ಭಯಂಕರವಾಗಿ ಪರಿಣವಿುಸಿದೆ.


ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ಅರಸರ ಸಂಗಡ ಮದ್ಯಪಾನಮಾಡಿ ಮತ್ತನಾಗಿ ಡೇರೆಯಲ್ಲಿ ಕೂತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಯೆಹೂದ ಪ್ರಾಂತಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿವಿುತ್ತವಾಗಿ ಸಂತೋಷಿಸಿ ಉಂಡು ಕುಡಿದು ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ನಾನು ಮನಸ್ಸಿನಲ್ಲಿ, - ಬಾ, ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಸುಖದ ರುಚಿ ನೋಡು ಅಂದುಕೊಂಡೆನು. ಆಹಾ, ಇದೂ ವ್ಯರ್ಥವೇ.


ನಗೆಗಿಂತ ಕರಕರೆಯು ವಾಸಿ; ಮುಖವು ಸಪ್ಪೆಗಿರುವಲ್ಲಿ ಹೃದಯಕ್ಕೆ ಮೇಲು.


ಅಜ್ಞಾನಿಗಳ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು