Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:7 - ಕನ್ನಡ ಸತ್ಯವೇದವು J.V. (BSI)

7 ಕಸುಕೊಳ್ಳುವದು ಜ್ಞಾನಿಗೆ ಬುದ್ಧಿಗೇಡು; ಲಂಚವು ವಿವೇಕನಾಶಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. ಲಂಚವು ಅವನ ವಿವೇಕವನ್ನು ಕೆಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:7
14 ತಿಳಿವುಗಳ ಹೋಲಿಕೆ  

ನೀವು ನ್ಯಾಯವನ್ನು ಬಿಟ್ಟು ತೀರ್ಮಾನಮಾಡಬಾರದು; ಪಕ್ಷಪಾತಮಾಡಬಾರದು; ಲಂಚತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರಂತೆ ಮಾಡುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಲಂಚವನ್ನು ತೆಗೆದುಕೊಳ್ಳಬಾರದು; ಲಂಚವು ಕಣ್ಣುಳ್ಳವರನ್ನು ಕುರುಡರಂತೆ ಮಾಡುತ್ತದೆ, ನಿರಪರಾಧಿಯಾದವನ ನ್ಯಾಯವನ್ನು ಕೆಡಿಸುತ್ತದೆ.


ದುಷ್ಟನು ಲಂಚವನ್ನು ಮಡಲಿನಿಂದ ತೆಗೆದುಕೊಂಡು ನ್ಯಾಯವನ್ನು ತಪ್ಪಿಸುವನು.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.


ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.


ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು. ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪುಮಾಡುತ್ತಿದ್ದದರಿಂದ


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವದಿಲ್ಲ; ಸ್ವಲ್ಪ ಹೊತ್ತು ಅಂಗಾಲಿಡುವದಕ್ಕೂ ಸ್ಥಳ ಸಿಕ್ಕುವದಿಲ್ಲ. ನೀವು ನಡುಗುವ ಹೃದಯವುಳ್ಳವರಾಗಿಯೂ ದಿಕ್ಕು ತೋರದೆ ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಂತೆ ಯೆಹೋವನು ಮಾಡುವನು.


[ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು;


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ.


ಒಬ್ಬನು ಮತ್ತೊಬ್ಬನ ಮೇಲೆ ಅಧಿಕಾರ ನಡಿಸಿ ಅವನಿಗೆ ಹಾನಿಯನ್ನುಂಟುಮಾಡುವ ಈ ಕಾಲದಲ್ಲಿ ಇದನ್ನೆಲ್ಲಾ ನೋಡಿ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ.


ಆಗ ಆಕೀಷನು ತನ್ನ ಸೇವಕರಿಗೆ - ಈ ಮನುಷ್ಯನು ಹುಚ್ಚನೆಂದು ನಿಮಗೆ ಕಾಣುವದಿಲ್ಲವೋ? ಇವನನ್ನು ನನ್ನ ಹತ್ತಿರ ಯಾಕೆ ತಂದಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು