Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:9 - ಕನ್ನಡ ಸತ್ಯವೇದವು J.V. (BSI)

9 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:9
24 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ಮುಂಗೋಪಿಯು ಬುದ್ಧಿಗೆಡುವನು; ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.


ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ; ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.


ಇದಕ್ಕೆ ಹೆರೋದ್ಯಳು ಅವನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಆಗದೆ ಹೋಯಿತು.


ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.


ಆಗ ಇಸ್ರಾಯೇಲ್ಯರು ಯೆಹೂದ್ಯರಿಗೆ - ಅರಸನಲ್ಲಿ ನಮಗೆ ಹತ್ತುಪಾಲು ಉಂಟಲ್ಲಾ; ದಾವೀದನ ವಿಷಯದಲ್ಲಿಯೂ ನಮಗೆ ಹೆಚ್ಚು ಹಕ್ಕು ಉಂಟು. ಹೀಗಿರುವದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸನನ್ನು ಕರಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೋ ಅಂದರು. ಇಸ್ರಾಯೇಲ್ಯರ ಮಾತುಗಳಿಗಿಂತ ಯೆಹೂದ್ಯರ ಮಾತುಗಳು ಕಠಿಣವಾಗಿದ್ದವು.


ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇ ಮಾತನ್ನಾಗಲಿ ಕೆಟ್ಟ ಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ಆಗ ಅವಳು ಹೊರಕ್ಕೆ ಹೋಗಿ - ನಾನು ಏನು ಕೇಳಿಕೊಳ್ಳಲಿ? ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು - ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ ಅಂದಳು.


ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ - ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.


ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ಹಿಂದಿನ ಕಾಲವು ಈ ಕಾಲಕ್ಕಿಂತ ಮೇಲಾದದ್ದಕ್ಕೆ ಕಾರಣವೇನು ಅನ್ನಬೇಡ; ನೀನು ಈ ವಿಷಯದಲ್ಲಿ ವಿಚಾರಿಸುವದು ಜ್ಞಾನಕಾರ್ಯವಲ್ಲ.


ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಹೋಗಬೇಡ; ಅವನು ನಿನ್ನ ಮಾನ ಕಳೆದ ಮೇಲೆ ಕಡೆಯಲ್ಲಿ ಏನು ಮಾಡಬಲ್ಲೆ, ನೋಡಿಕೋ!


ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು