ಪ್ರಸಂಗಿ 8:17 - ಕನ್ನಡ ಸತ್ಯವೇದವು J.V. (BSI)17 ಲೋಕದಲ್ಲಿ ನಡೆಯುವದನ್ನು ಮನುಷ್ಯನು ಗ್ರಹಿಸಲಾರನು, ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಗ್ರಹಿಸಲಾರನು; ಹೌದು, ಜ್ಞಾನಿಯು ಗ್ರಹಿಸಬಹುದೆಂದರೂ ಗ್ರಹಿಸಲಾರನು ಎಂಬದಾಗಿ ನಾನು ದೇವರ ಕೆಲಸವನ್ನೆಲ್ಲಾ ದೃಷ್ಟಿಸಿ ತಿಳಿದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಅವನಿಂದ ಸಾಧ್ಯವಾಗದು. ಹೌದು, ಜ್ಞಾನಿ ತನ್ನಿಂದಾಗುತ್ತದೆ ಎಂದು ಹೇಳಿಕೊಳ್ಳಬಹುದು; ಆದರೆ ಅವನಿಂದಲೂ ಅದು ಸಾಧ್ಯವಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಇದಲ್ಲದೆ ದೇವರ ಅನೇಕ ಕಾರ್ಯಗಳನ್ನು ಸಹ ನಾನು ನೋಡಿದ್ದೇನೆ. ಭೂಮಿಯ ಮೇಲೆ ದೇವರು ಮಾಡುವ ಕಾರ್ಯಗಳನ್ನೆಲ್ಲಾ ಜನರು ಅರ್ಥಮಾಡಿಕೊಳ್ಳಲಾರರು. ಒಬ್ಬನು ಅರ್ಥಮಾಡಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅವನು ಅರ್ಥಮಾಡಿಕೊಳ್ಳಲಾರನು. ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಬಲ್ಲೆನೆಂದು ಜ್ಞಾನಿಯು ಹೇಳಿಕೊಂಡರೂ ಅದು ಸತ್ಯವಲ್ಲ. ಅವುಗಳನ್ನೆಲ್ಲ ಯಾರೂ ಅರ್ಥಮಾಡಿಕೊಳ್ಳಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ತರುವಾಯ ದೇವರ ಮಾಡುವ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು. ಅದೇನೆಂದರೆ, ಸೂರ್ಯನ ಕೆಳಗೆ ಮಾಡುವ ದೇವರ ಕೆಲಸಗಳನ್ನು ಮನುಷ್ಯನು ಗ್ರಹಿಸಲಾರನು. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಸಹ ದೇವರು ಮಾಡುವುದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು. ಅಧ್ಯಾಯವನ್ನು ನೋಡಿ |