Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:3 - ಕನ್ನಡ ಸತ್ಯವೇದವು J.V. (BSI)

3 ರಾಜಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ; ದ್ರೋಹಕ್ಕೆ ಸೇರದಿರು; ಅವನು ಇಷ್ಟಬಂದಂತೆ ಮಾಡಬಲ್ಲನಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದುಡುಕುತನದಿಂದ ಅರಸನಿಗೆ ಬೆನ್ನು ತೋರಿಸಬೇಡ; ಕೆಟ್ಟ ವಿಷಯದಲ್ಲಿ ಹಟಮಾಡಬೇಡ. ಆತನು ತನಗಿಷ್ಟಬಂದಂತೆ ಮಾಡಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನಿಗೆ ನಿಮ್ಮ ಆಲೋಚನೆಗಳನ್ನು ತಿಳಿಸಲು ಭಯಪಡಬಾರದು; ನೀವು ಯಾವ ತಪ್ಪಿಗೂ ಬೆಂಬಲ ಕೊಡಬಾರದು. ಆದರೆ ರಾಜನು ತನಗೆ ಇಷ್ಟಬಂದಂತೆ ಆಜ್ಞೆಗಳನ್ನು ಕೊಡುತ್ತಾನೆಂಬುದು ಜ್ಞಾಪಕದಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನನ್ನು ಬಿಟ್ಟುಹೋಗುವುದಕ್ಕೆ ಆತುರ ಪಡಬೇಡಿರಿ. ಅರಸನು ತನಗೆ ಇಷ್ಟಬಂದದ್ದನ್ನೆಲ್ಲಾ ಮಾಡುತ್ತಾನೆ. ನೀವು ಕೆಟ್ಟ ಕಾರ್ಯಕ್ಕಾಗಿ ನಿಲ್ಲಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:3
13 ತಿಳಿವುಗಳ ಹೋಲಿಕೆ  

ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.


ಈ ಮಹತ್ವ ವರದ ನಿವಿುತ್ತ ಸಕಲ ಜನಾಂಗಕುಲಭಾಷೆಗಳವರು ಅವನ ಮುಂದೆ ಬೆಚ್ಚಿಬೆದರಿದರು; ಬೇಕುಬೇಕಾದವರನ್ನು ಕೊಲ್ಲಿಸಿದನು, ಬೇಕುಬೇಕಾದವರನ್ನು ಉಳಿಸಿದನು, ಮನಸ್ಸುಬಂದವರನ್ನು ಏರಿಸಿದನು, ಮನಸ್ಸುಬಂದವರನ್ನು ಇಳಿಸಿದನು.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಬೇಟೆಯ ನಾಯಿ, ಹೋತವು ಸಹ, ಸೈನ್ಯಸಮೇತನಾದ ರಾಜ.


ಯಾಕೋಬನು - ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ; ನಾನು ಜೀವಿಸಿರುವ ಕಾಲವು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇತ್ತು; ನನ್ನ ಪಿತೃಗಳು ಲೋಕಯಾತ್ರೆ ಮಾಡಿದಷ್ಟು ವರುಷಗಳು ನನಗಾಗಿಲ್ಲ ಎಂದು ಹೇಳಿ


ಮಗನೇ, ಯೆಹೋವನಿಗೂ ರಾಜನಿಗೂ ಭಯಪಡು; ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು