Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:4 - ಕನ್ನಡ ಸತ್ಯವೇದವು J.V. (BSI)

4 ರಾಜನ ಮಾತಿಗೆ ಅಧಿಕಾರವುಂಟು; ಏನು ಮಾಡುತ್ತೀ ಎಂದು ಅವನನ್ನು ಯಾರು ತಾನೇ ಕೇಳಬಹುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನ ಮಾತಿಗೆ ಅಧಿಕಾರವುಂಟು “ನೀನು ಏನು ಮಾಡುತ್ತಿರುವೆ?” ಎಂದು ಅವನನ್ನು ಯಾರು ತಾನೇ ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅರಸನ ಮಾತು ಅಧಿಕಾರದಿಂದ ಕೂಡಿದೆ. “ನೀನು ಮಾಡುವುದೇನು?” ಎಂದು ಅವನನ್ನು ಪ್ರಶ್ನಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಜ್ಞೆಗಳನ್ನು ಕೊಡಲು ರಾಜನಿಗೆ ಅಧಿಕಾರವಿದೆ. ಅವನನ್ನು ಬಲವಂತ ಮಾಡಲು ಯಾರಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅರಸನ ಮಾತುಗಳೇ ಸರ್ವೋನ್ನತವಾದುದರಿಂದ, “ನೀನು ಮಾಡುವುದೇನು?” ಎಂದು ಅವನಿಗೆ ಪ್ರಶ್ನಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:4
18 ತಿಳಿವುಗಳ ಹೋಲಿಕೆ  

ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ನೀನು ಏನು ಮಾಡುತ್ತಿ ಎಂದು ಆತನನ್ನು ಕೇಳುವವರಾರು?


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ಈಗಲಾದರೂ ನೀವು ಸಿದ್ಧವಾಗಿದ್ದು ತುತೂರಿ ಕೊಳಲು ಕಿನ್ನರಿ ತಂಬೂರಿ ವೀಣೆ ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ನಾನು ನಿಲ್ಲಿಸಿದ ಪ್ರತಿಮೆಯನ್ನು ಪೂಜಿಸಿದರೆ ಸರಿ; ಇಲ್ಲವಾದರೆ ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲ್ಪಡುವಿರಿ; ನಿಮ್ಮನ್ನು ನನ್ನ ಕೈಯೊಳಗಿಂದ ಬಿಡಿಸಬಲ್ಲ ದೇವರು ಯಾರು ಎಂದು ಹೇಳಿದನು.


ಬೇಟೆಯ ನಾಯಿ, ಹೋತವು ಸಹ, ಸೈನ್ಯಸಮೇತನಾದ ರಾಜ.


ಯೆಹೋಯಾದಾವನ ಮಗನಾದ ಬೆನಾಯನಿಗೆ ಅವನನ್ನು ಸಂಹರಿಸೆಂದು ಆಜ್ಞಾಪಿಸಲು ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸ್ಥಿರವಾಯಿತು.


ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದದರಿಂದ ಅವನು ಹೋಗಿ ಅವನನ್ನು ಹೊಡೆದು ಕೊಂದುಹಾಕಿದನು.


ಆಗ ಐಗುಪ್ತ್ಯರ ಅರಸನು ಅವರನ್ನು ಕರಸಿ - ನೀವು ಅವರ ಗಂಡುಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ ಎಂದು ಕೇಳಲು ಸೂಲಗಿತ್ತಿಯರು ಫರೋಹನಿಗೆ -


ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದದರಿಂದ ಅವರು ಇಸ್ರಾಯೇಲ್ಯರನ್ನು ಲೆಕ್ಕಿಸುವದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟು ಹೋದರು.


ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಿ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು ಅಂದನು.


ಅರಸನಾದ ದಾರ್ಯಾವೆಷನು ಆಜ್ಞೆಯನ್ನು ಕೊಟ್ಟದರಿಂದ ಹೊಳೆಯ ಈಚೆಯ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆಗಾರರೂ ಜಾಗರೂಕರಾಗಿ ಅದನ್ನು ಅನುಸರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು