Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:7 - ಕನ್ನಡ ಸತ್ಯವೇದವು J.V. (BSI)

7 ಏಕಂದರೆ ಮುಂದೆ ಆಗುವದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಆಗುವದೋ ಅವನಿಗೆ ವಿವರಿಸಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮುಂದೆ ಏನಾಗುವುದು ಯಾರಿಗೂ ಗೊತ್ತಿಲ್ಲ. ಮುಂದೆ ಆಗುವುದನ್ನು ಅವನಿಗೆ ವಿವರಿಸಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯಾಕೆಂದರೆ ಮುಂದೆ ಏನಾಗುವುದೋ ಅವನಿಗೆ ತಿಳಿಯದು. ಮುಂದೆ ಅದು ಹೇಗೆ ಆಗುವುದೋ ಎಂದು ಅವನಿಗೆ ತಿಳಿಸುವವರು ಯಾರು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಮುಂದೆ ಆಗುವುದೇನೆಂದು ಯಾರಿಗೂ ತಿಳಿಯದು. ಮುಂದೆ ಏನಾಗುವುದೆಂದು ಮನುಷ್ಯನಿಗೆ ತಿಳಿಸುವವರು ಯಾರು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:7
14 ತಿಳಿವುಗಳ ಹೋಲಿಕೆ  

ಮನುಷ್ಯನು ಮುಂದಿನದನ್ನು ತಿಳಿಯನು; ತಾನು ಕಾಲವಾದ ಮೇಲೆ ಹೀಗೆಯೇ ಆಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.


ಅವನು ನೆನಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ಹೊಡಿಸಿ


ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.


ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?


ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವದು ಮೇಲೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವದೆಂದು ಅವನು ಯಾರಿಂದ ತಿಳಿದುಕೊಂಡಾನು?


ಈ ಪ್ರಕಾರ ನಾನು ಯೋಚಿಸಿ, ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ; ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದನಂತರ ಸಂಭವಿಸುವವುಗಳನ್ನು ನೋಡುವದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಸುಖದ ದಿನದಲ್ಲಿ ಸುಖದಿಂದಿರು; ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವದನ್ನೂ ಗ್ರಹಿಸಲಾರದಂತೆ ದೇವರು ಇವುಗಳನ್ನು ದ್ವಂದ್ವ ಮಾಡಿದ್ದಾನೆ.


ಅಹಹ! ಎಸ್ತೇರ್ ರಾಣಿಯು ತಾನು ಸಿದ್ಧಮಾಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ನನ್ನನ್ನು ಹೊರತಾಗಿ ಇನ್ನಾರನ್ನೂ ಕರಿಸಲಿಲ್ಲ. ನಾಳೆಯೂ ಅರಸನ ಜೊತೆಯಲ್ಲಿ ಬರಬೇಕೆಂದು ನನಗೆ ಹೇಳಿದ್ದಾಳೆ.


ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ಏಕೆಂದರೆ ಧರ್ಮಿಗಳೂ ಜ್ಞಾನಿಗಳೂ ಅವರ ಕೃತ್ಯಗಳೂ ದೇವರ ಕೈಯಲ್ಲುಂಟು; ತಾವು ಪ್ರೀತಿಗೆ ಗುರಿಯೋ ದ್ವೇಷಕ್ಕೆ ಗುರಿಯೋ ಮನುಷ್ಯರಿಗೆ ಗೊತ್ತಿಲ್ಲ. ಅವರ ಮುಂದೆ ಸಮಸ್ತವೂ ಕಾದಿದೆ ಎಂಬೀ ವಿಷಯಗಳನ್ನೆಲ್ಲಾ ವಿಚಾರಿಸಬೇಕೆಂದು ಮನಸ್ಸಿಗೆ ತೆಗೆದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು