ಪ್ರಸಂಗಿ 8:8 - ಕನ್ನಡ ಸತ್ಯವೇದವು J.V. (BSI)8 ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ ಹಾಗೆ ತಮ್ಮ ಮರಣದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ; ಯುದ್ಧಕಾಲದಲ್ಲಿ ಹೇಗೆ ವಿರಾಮ ದೊರೆಯುವದಿಲ್ಲವೋ ಹಾಗೆ ಅಧರ್ಮಕ್ಕೊಳಪಟ್ಟವನಿಗೆ ಬಿಡುಗಡೆಯಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟುಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ. ಅಧ್ಯಾಯವನ್ನು ನೋಡಿ |