ಪ್ರಸಂಗಿ 9:14 - ಕನ್ನಡ ಸತ್ಯವೇದವು J.V. (BSI)14 ಇಗೋ, ಒಂದು ಚಿಕ್ಕ ಪಟ್ಟಣ, ಅದರಲ್ಲಿ ಕೊಂಚ ಜನರೇ ಇದ್ದರು; ಒಬ್ಬ ದೊಡ್ಡ ಅರಸು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಕೆಲವೇ ನಿವಾಸಿಗಳು. ಬಲಿಷ್ಠವಾದ ಅರಸ ಅದಕ್ಕೆ ಮುತ್ತಿಗೆಹಾಕಿದ. ಅದರ ಸುತ್ತಲು ದೊಡ್ಡ ಕೋಟೆ ಎಬ್ಬಿಸಿದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕೆಲವು ಜನರಿದ್ದ ಒಂದು ಚಿಕ್ಕ ನಗರವಿತ್ತು. ಒಬ್ಬ ದೊಡ್ಡ ರಾಜನು ಆ ನಗರದ ಮೇಲೆ ದಂಡೆತ್ತಿ ಬಂದು ಮುತ್ತಿಗೆ ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಒಂದು ಕಾಲದಲ್ಲಿ ಒಂದು ಸಣ್ಣ ನಗರವಿತ್ತು, ಅದರಲ್ಲಿ ಕೆಲವೇ ಜನರಿದ್ದರು. ಆಗ ಅಲ್ಲಿ ಒಬ್ಬ ಮಹಾ ಅರಸನು ಬಂದು ಅದನ್ನು ಮುತ್ತಿಗೆ ಹಾಕಿ, ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |