Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:17 - ಕನ್ನಡ ಸತ್ಯವೇದವು J.V. (BSI)

17 ಹುಚ್ಚರೊಡೆಯನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಅಂಟುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹುಚ್ಚರ ಕೂಟದಲ್ಲಿ ಕೇಳಿಬರುವ ಅಧ್ಯಕ್ಷನ ಕೂಗಾಟಕ್ಕಿಂತ ಜ್ಞಾನಿಯ ಮೆಲ್ಲನೆಯ ಮಾತು ಕಿವಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಜ್ಞಾನಿಯ ಮೆಲ್ಲನೆಯ ಮಾತುಗಳು ಮೂಢನಾದ ಅಧಿಪತಿಯು ಕೂಗಿಹೇಳಿದ ಮಾತುಗಳಿಗಿಂತಲೂ ಎಷ್ಟೋ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹುಚ್ಚರನ್ನು ಆಳುವವನ ಕೂಗಾಟಕ್ಕಿಂತಲೂ ಜ್ಞಾನಿಯ ಸಮಾಧಾನದ ಮಾತಿಗೆ ಮಹತ್ವ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:17
10 ತಿಳಿವುಗಳ ಹೋಲಿಕೆ  

ಮುಖಸ್ತುತಿ ಮಾಡುವವನಿಗಿಂತಲೂ ಗದರಿಸುವವನು ಬಳಿಕ ಹೆಚ್ಚು ದಯಾಪಾತ್ರನಾಗುವನು.


ಮನುಷ್ಯನ ಕೋಪವು ದೇವರಿಗೆ ಮೆಚ್ಚಿಕೆಯಾಗಿರುವ ನೀತಿಗೆ ಅನುಕೂಲವಾಗುವದಿಲ್ಲ.


ಇವನು ಕೂಗಾಡುವದಿಲ್ಲ, ಆರ್ಭಟಿಸುವದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವದಿಲ್ಲ.


ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ ಜಜ್ಜಿಹೋಗದೆಯೂ [ತನ್ನ ಕಾರ್ಯದಲ್ಲಿ ನಿರತನಾಗಿರುವನು]; ದ್ವೀಪದ್ವೀಪಾಂತರಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು.


ಅಜ್ಞಾನಿಗಳ ಗಾನಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.


ಜ್ಞಾನಿಯ ಮಾತು ಹಿತ; ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವದು.


ಈ ಮಾತುಗಳನ್ನು ಹೇಳಿ ಸಭೆಯನ್ನು ಮುರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು