Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:2 - ಕನ್ನಡ ಸತ್ಯವೇದವು J.V. (BSI)

2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವದು; ಶಿಷ್ಟನಿಗೂ ದುಷ್ಟನಿಗೂ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಯಜ್ಞಮಾಡುವವನಿಗೂ ಮಾಡದವನಿಗೂ ಒಂದೇ ಗತಿ; ನಿರ್ದೋಷಿಯಂತೆ ದೋಷಿಯಿರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನು ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಎಲ್ಲರಿಗೂ ಸಂಭವಿಸುವುದು ಒಂದೇ. ಅದೇ ಮರಣ. ಒಳ್ಳೆಯವರಿಗೂ ಕೆಟ್ಟವರಿಗೂ ಶುದ್ಧರಿಗೂ ಅಶುದ್ಧರಿಗೂ ಯಜ್ಞಗಳನ್ನು ಅರ್ಪಿಸುವವರಿಗೂ ಅರ್ಪಿಸದವರಿಗೂ ಮರಣವಾಗುತ್ತದೆ. ಒಳ್ಳೆಯವನು ಸಹ ಕೇವಲ ಪಾಪಿಯಂತೆ ಸಾಯುವನು. ದೇವರಿಗೆ ವಿಶೇಷವಾದ ಹರಕೆಗಳನ್ನು ಮಾಡುವವನು ಸಹ ಆ ಹರಕೆಗಳನ್ನು ಮಾಡಲು ಭಯಪಡುವ ವ್ಯಕ್ತಿಯಂತೆ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:2
22 ತಿಳಿವುಗಳ ಹೋಲಿಕೆ  

ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನನ್ನ ಕಾಲುಗಳು ಜಾರಿದವುಗಳೇ; ನನ್ನ ಹೆಜ್ಜೆಗಳು ತಪ್ಪಿದವುಗಳೇ.


ಎಲ್ಲಾ ಒಂದೇ ಸರಿ, ಆದಕಾರಣ ನಾನು - ನಿರ್ದೋಷಿಯನ್ನೂ ದೋಷಿಯನ್ನೂ ಆತನು ನಾಶಮಾಡುತ್ತಾನೆ ಎಂದು ಹೇಳುತ್ತೇನೆ.


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು; ಅದರಿಂದಲೂ ಕೈದೆಗೆಯಬೇಡ; ದೇವರಲ್ಲಿ ಭಯಭಕ್ತಿಯುಳ್ಳವನು ಇವೆರಡರಿಂದಲೂ ಪಾರಾಗುವನು.


ಜನನ ದಿನಕ್ಕಿಂತ ಮರಣ ದಿನ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವದು ಲೇಸು; ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ; ಜೀವಂತನು ಇದನ್ನು ನೋಡಿ ಸ್ಮರಿಸಿಕೊಳ್ಳುವನು.


ಸಾವಿರದ ಮೇಲೆ ಸಾವಿರ ವರುಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ [ಏನು ಪ್ರಯೋಜನ?] ಇವೆರಡು ಒಂದೇ ಸ್ಥಳಕ್ಕೆ ಹೋಗುತ್ತವಲ್ಲವೆ.


ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ನಾನು ವಾಸವಾಗಿರುವ ಕಾನಾನ್ಯರಲ್ಲಿ ನೀನು ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ಸ್ವದೇಶಕ್ಕೂ


ಅವರು ಅಲ್ಲಿ ಜೇನುತುಪ್ಪ ಹರಿಯುವದನ್ನು ಕಂಡರೂ ಶಾಪಕ್ಕೆ ಭಯಪಟ್ಟದರಿಂದ ಯಾವನೂ ಅದನ್ನು ಬಾಯೊಳಗೆ ಹಾಕಲಿಲ್ಲ.


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುವದು; ಎಲ್ಲಕ್ಕೂ ಪ್ರಾಣ ಒಂದೇ; ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ; ಎಲ್ಲಾ ಬರೀ ಗಾಳಿಯೇ.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.


ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು, ಅಂತು ಗಂಡಸರು, ಹೆಂಗಸರು, ಮಕ್ಕಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು