Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:9 - ಕನ್ನಡ ಸತ್ಯವೇದವು J.V. (BSI)

9 ಲೋಕದೊಳಗೆ ದೇವರು ನಿನಗೆ ನೇವಿುಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳಲ್ಲೆಲ್ಲಾ ನಿನ್ನ ಪ್ರಿಯಪತ್ನಿಯೊಡನೆಯ ಸುಖದಿಂದ ಬದುಕು; ನಿನ್ನ ಬಾಳಿನಲ್ಲಿಯೂ ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನಗೆ ಬಂದ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಪ್ರಿಯ ಪತ್ನಿಯೊಡನೆ ಸುಖಪಡು. ನಿನ್ನ ಅಲ್ಪಕಾಲ ಜೀವಿತದ ದಿನಗಳಲ್ಲೆಲ್ಲಾ ಸುಖಪಡು. ಈ ಜೀವಿತವನ್ನು ನಿನಗೆ ಅನುಗ್ರಹಿಸಿರುವಾತನು ದೇವರೇ, ಇದೇ ನಿನ್ನ ಪಾಲು. ನಿನ್ನ ಈ ಜೀವಿತದ ಕೆಲಸಕಾರ್ಯಗಳನ್ನು ಸಂತೋಷದಿಂದ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:9
14 ತಿಳಿವುಗಳ ಹೋಲಿಕೆ  

ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.


ಪರಮಾತ್ಮಾಂಶನಾದ ಯಾವನೂ ಹೀಗೆ ಮಾಡಲಿಲ್ಲ; ಆ ಪ್ರಸಿದ್ಧನೊಬ್ಬನು ಏಕೆ ಇಂಥ ಕೃತ್ಯಮಾಡಿದನು? ದೇವರ ವರವಾದ ಸಂತಾನವನ್ನು ಹಾರೈಸಿಯೇ. ಹೀಗಿರಲು ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ಯಾವನೂ ತನ್ನ ಯೌವನದ ಪತ್ನಿಗೆ ದ್ರೋಹಮಾಡದಿರಲಿ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ದಿನಗಳಲ್ಲೆಲ್ಲಾ ಅವನಿಗೆ ಯಾವದು ಮೇಲೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವದೆಂದು ಅವನು ಯಾರಿಂದ ತಿಳಿದುಕೊಂಡಾನು?


ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.


ಧರ್ಮಿಯು ತನ್ನ ಧರ್ಮದಲ್ಲಿಯೇ ನಶಿಸುವದುಂಟು; ಅಧರ್ಮಿಯು ತನ್ನ ಅಧರ್ಮದಲ್ಲಿಯೇ ಬಹು ದಿನ ಬದುಕುವದುಂಟು; ಇದನ್ನೆಲ್ಲಾ ನನ್ನ ವ್ಯರ್ಥವಾದ ಜೀವಮಾನದಲ್ಲಿ ನೋಡಿದ್ದೇನೆ.


ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.


ಈ ಪ್ರಕಾರ ನಾನು ಯೋಚಿಸಿ, ಮನುಷ್ಯನು ತನ್ನ ಕಾರ್ಯಗಳಲ್ಲಿ ಉಲ್ಲಾಸಗೊಳ್ಳುವದಕ್ಕಿಂತ ಅವನಿಗೆ ಯಾವ ಮೇಲೂ ಇಲ್ಲ; ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಜೀವಮಾನದನಂತರ ಸಂಭವಿಸುವವುಗಳನ್ನು ನೋಡುವದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.


ಮನೆಮಾರೂ ಆಸ್ತಿಪಾಸ್ತಿಯೂ ಪಿತೃಗಳಿಂದ ದೊರಕುವವು; ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.


ಪತ್ನೀಲಾಭವು ರತ್ನಲಾಭ, ಅದು ಯೆಹೋವನ ಅನುಗ್ರಹವೇ.


ಮನುಷ್ಯನು ಬರೀ ಉಸಿರೇ; ಅವನ ಜೀವಕಾಲವು ಬೇಗನೆ ಗತಿಸಿಹೋಗುವ ನೆರಳಿನಂತಿದೆ.


ನನ್ನ ಆಯುಸ್ಸನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರೀ ಉಸಿರೇ. ಸೆಲಾ.


ಅವನು ಆ ಸ್ಥಳದಲ್ಲಿ ಬಹಳ ದಿವಸ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು