Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:1 - ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚಿ ಸೆವಕಾ ಪಾವ್ಲು ಅನಿ ತಿಮೊಥಿ, ಫಿಲಿಪ್ಪಿ ಮನ್ತಲ್ಯಾ ಶಾರಾತ್ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ದೆವಾಚಿ ಲೊಕಾ ಹೊಲ್ಲ್ಯಾ ಸಗ್ಳ್ಯಾಕ್ನಿ, ಅನಿ ತೆಂಚ್ಯಾ ವಾಂಗ್ಡಾ ದೆವಾಚ್ಯಾ ತಾಂಡ್ಯಾಚಿ ಮುಖಂಡಾ, ಅನಿ ತಾಂಡ್ಯಾಚ್ಯಾ ಮಜತ್ ಕಾರಾಕ್ನಿ ಲಿವ್ತಲೆ ಕಾಯ್ ಮಟ್ಲ್ಯಾರ್:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:1
48 ತಿಳಿವುಗಳ ಹೋಲಿಕೆ  

ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲೆಲ್ಲಾ ಇರುವ ದೇವಜನರೆಲ್ಲರಿಗೂ ಬರೆಯುವದೇನಂದರೆ -


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟವನೂ ದೇವರ ಸುವಾರ್ತೆಯನ್ನು ಸಾರುವದಕ್ಕೆ ನೇವಿುಸಲ್ಪಟ್ಟವನೂ ಆಗಿರುವ ಪೌಲನು


ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ಮಾತಿನವರೂ


ನಮ್ಮ ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ -


ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ಯೇಸು ಕ್ರಿಸ್ತನ ದಾಸನೂ ಯಾಕೋಬನ ತಮ್ಮನೂ ಆಗಿರುವ ಯೂದನು ತಂದೆಯಾದ ದೇವರಲ್ಲಿ ಪ್ರಿಯರಾದವರೂ ಯೇಸು ಕ್ರಿಸ್ತನಿಗಾಗಿ ಕಾಯಲ್ಪಟ್ಟವರೂ ಆಗಿರುವವರಿಗೆ ಬರೆಯುವದೇನಂದರೆ -


ನೀವು ಕುರಿಗಳಂತೆ ದಾರಿತಪ್ಪಿ ತೊಳಲುವವರಾಗಿದ್ದಿರಿ, ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳನ್ನು ಕಾಯುವ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾರಹಿತನಾಗಿರಬೇಕು; ಅವನು ಸ್ವೇಚ್ಫಾಪರನಾದರೂ ಮುಂಗೋಪಿಯಾದರೂ ಕುಡಿದು ಜಗಳಮಾಡುವವನಾದರೂ ಹೊಡೆದಾಡುವವನಾದರೂ ನೀಚಲಾಭವನ್ನು ಅಪೇಕ್ಷಿಸುವವನಾದರೂ ಆಗಿರದೆ


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನೂ ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನೂ ನೀವೇ ಬಲ್ಲಿರಿ.


ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.


ತಿಮೊಥೆಯನು ಬಂದರೆ ಅವನು ನಿಮ್ಮ ಬಳಿಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಕರ್ತನ ಕೆಲಸವನ್ನು ನಡಿಸುತ್ತಾನೆ;


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;


ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ಹಿಂದೆ ಬರಲಿ; ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನು ಸಹ ಇರುವನು. ಯಾವನಾದರೂ ನನ್ನ ಸೇವೆಯನ್ನು ಮಾಡುವವನಾದರೆ ತಂದೆಯು ಅವನಿಗೆ ಬಹುಮಾನ ಮಾಡುವನು.


ಒಬ್ಬ ಮನುಷ್ಯಸು ತನ್ನ ಮನೆಯನ್ನು ಬಿಟ್ಟು ಬೇರೊಂದು ದೇಶಕ್ಕೆ ಹೋಗುವಾಗ ತನ್ನ ಆಳುಗಳಿಗೆ ಮನೇ ಆಡಳಿತವನ್ನು ಒಪ್ಪಿಸಿಕೊಟ್ಟು ಒಬ್ಬೊಬ್ಬನಿಗೆ ಅವನವನ ಕೆಲಸವನ್ನು ನೇವಿುಸಿ ಬಾಗಿಲುಕಾಯುವವನನ್ನು ಕರೆದು - ನೀನು ಎಚ್ಚರವಾಗಿರಬೇಕೆಂದು ಅಪ್ಪಣೆ ಕೊಡುವ ಪ್ರಕಾರ [ನಾನು ನಿಮಗೆ ಅಪ್ಪಣೆ ಕೊಡುತ್ತೇನೆ].


ಅವನು ನನಗೆ - ಮಾಡಬೇಡ ನೋಡು; ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವವರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಎಂದು ಹೇಳಿದನು.


ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ಅವನ ವಿಷಯವಾಗಿ - ಅವನ ಮನೆ ಹಾಳುಬೀಳಲಿ, ಅದು ಜನಶೂನ್ಯವಾಗಲಿ ಎಂತಲೂ ಅವನ ಉದ್ಯೋಗವು ಮತ್ತೊಬ್ಬನಿಗಾಗಲಿ ಎಂತಲೂ ಕೀರ್ತನೆಗಳ ಗ್ರಂಥದಲ್ಲಿ ಬರೆದದೆ.


ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.


ಆದರೆ ಕರ್ತನಾದ ಯೇಸುವಿನ ಚಿತ್ತವಾದರೆ ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಧೈರ್ಯತಂದುಕೊಂಡೇನು.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ.


ಕ್ರಿಸ್ತ ಯೇಸುವಿನ ಸೆರೆಯವನಾಗಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನೂ ಜೊತೆಕೆಲಸದವನೂ ಆಗಿರುವ ಫಿಲೆಮೋನನೆಂಬ ನಿನಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು