ಫಿಲಿಪ್ಪಿಯವರಿಗೆ 1:17 - ಕನ್ನಡ ಸತ್ಯವೇದವು J.V. (BSI)17 ಆ ಬೇರೆ ತರದವರಾದರೋ ನಾನು ಬೇಡಿಬಿದ್ದಿರುವಾಗಲೂ ನನಗೆ ಸಂಕಟವನ್ನು ಎಬ್ಬಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಿಪಡಿಸದೆ ಕಕ್ಷಿಭಾವದಿಂದ ಪ್ರಸಿದ್ಧಿಪಡಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬೇರೆ ಕೆಲವರು ತಮ್ಮ ಸ್ವಾರ್ಥದ ದೆಸೆಯಿಂದ ಕ್ರಿಸ್ತನ ವಿಷಯವಾಗಿ ಬೋಧಿಸುತ್ತಾರೆ. ಅವರ ಸುವಾರ್ತಾಸೇವೆಯ ಉದ್ದೇಶವೇ ತಪ್ಪಾಗಿದೆ. ಸೆರೆಯಲ್ಲಿರುವ ನನಗೆ ತೊಂದರೆ ಮಾಡಬೇಕೆಂಬುದೇ ಅವರ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರಾದರೋ, ನಾನು ಬೇಡಿಗಳಿಂದ ಸೆರೆಮನೆಯಲ್ಲಿರುವಾಗ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧ ಪಡಿಸದೆ ಪ್ರತಿಸ್ಪರ್ಧೆಗಾಗಿ ಸಾರುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅನಿ ಉರಲ್ಲಿ ಲೊಕಾ ಖರ್ಯಾಪಾನಾನ್ ಪರ್ಗಟ್ ಕರಿನಾ ಹೊಲ್ಯಾತ್, ತೆನಿ ಬುರ್ಶ್ಯಾ ಮನಾನಿ ಅಪ್ಲ್ಯಾ ಸ್ವತಾಚ್ಯಾ ಸಾಟ್ನಿ ಮಾಕಾ ತರಾಸ್ ಲೈ ಹೊಂವ್ದಿ ಮನುನ್ ಕ್ರಿಸ್ತಾಕ್ ಪರ್ಗಟ್ ಕರ್ತಾತ್. ಅಧ್ಯಾಯವನ್ನು ನೋಡಿ |